ಮಂಡ್ಯ, ಜನವರಿ 16: ಇನ್ನೇನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನನ್ನು ಆಸ್ತಿ ವಿಚಾರಕ್ಕೆ ಆತನ ಸಹೋದರನೇ ತನ್ನ ಮಕ್ಕಳ ಜೊತೆ ಸೇರಿ ಬರ್ಬರವಾಗಿ ಕೊಲೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಗೇಶ್ ಮೃತ ದುರ್ದೈವಿ, ಮನೆಯ ಕೊಟ್ಟಿಗೆಯಲ್ಲಿದ್ದ ಈತನನ್ನು ಚಾಕುವಿನಿಂದ 2Oಕ್ಕೂ ಹೆಚ್ಚು ಬಾರಿ ಚುಚ್ಚಿ ಸಾಯಿಸಲಾಗಿದೆ. ಲಿಂಗರಾಜು ಮತ್ತು ಅವನ ಮಕ್ಕಳಾದ ಭರತ್ ಹಾಗೂ ದರ್ಶನ್ ಕೊಲೆ ಆರೋಪಿಗಳಾಗಿದ್ದು, ಘಟನೆ ಬಳಿಕ ತಲೆಮರೆಸಿದ್ದಾರೆ.
ತಂದೆ ಚಿನ್ನಮರಿಗೌಡ ನಿಧನದ ಬಳಿಕ ಎಲ್ಲ ವ್ಯವಹಾರಗಳನ್ನ ಹಿರಿಯಣ್ಣನಾದ ಲಿಂಗರಾಜು ನೋಡಿಕೊಳ್ಳುತ್ತಿದ್ದ. ಪಿತ್ರಾರ್ಜಿತವಾಗಿ ಬಂದಿದ್ದ 12 ಲಿಂಗ ಕೃಷಿ ಭೂಮಿಯನ್ನು ತನ್ನ ತಾಯಿ ಹೆಸರಿಗೆ ಪೌತಿ ಖಾತೆ ಮಾಡಿಸುವ ಬದಲು ತನ್ನ ಹೆಸರಿಗೆ ರಾಜು ವರ್ಗಾವಣೆ ಮಾಡಿಸಿಕೊಂಡಿದ್ದ. ಜೊತೆಗೆ ತಾಯಿ ಹೆಸರಿನಲ್ಲಿ ಖರೀದಿಸಿದ್ದ 6 ಜಮೀನು, ಮೈಸೂರು ಮತ್ತು ಮಂಡ್ಯದಲ್ಲಿದ್ದ 4 ನಿವೇಶನಗಳನ್ನು ತನ್ನ ಹೆಸರಿಗೆ ಖಾತೆ ಮಾಡಿಕೊಂಡಿದ್ದ. ಮುಂದೆ ನಮ್ಮ ಪಾಲಿನ ಆಸ್ತಿಯನ್ನ ನಮ್ಮಣ್ಣ ನೀಡುತ್ತಾನೆ ಎಂದು ಯೋಗೇಶ್ ಸೇರಿದಂತೆ ಇಬ್ಬರು ಸಹೋದರರು ಹಾಗೂ ಸಹೋದರಿಯರು ನಂಬಿದ್ದರು. ಆದರೆ, ಅವರಿಗೆಲ್ಲ ಮೋಸ ಮಾಡಿ ಲಿಂಗರಾಜು ತನ್ನ ಪತ್ನಿ ಹೆಸರಿಗೆ ದಾನಪತ್ರ ಮಾಡುವ ಮೂಲಕ ಸಂಪೂರ್ಣ ಆಸ್ತಿಯನ್ನು ವರ್ಗಾವಣೆ ಮಾಡಿದ್ದಾನೆ. ಈ ವಿಚಾರ ತಿಳಿದು ಸಹೋದರರಾದ ಕೆಂಪರಾಜು, ಯೋಗೇಶ್ ಪ್ರಶ್ನೆ ಮಾಡಿದಾಗ ಲಿಂಗರಾಜು ಜಗಳ ತೆಗೆದು ಹಲ್ಲೆ ಮಾಡಿದ್ದಾರೆ. ಬಳಿಕ ಆಸ್ತಿ ವಿಚಾರವಾಗಿ ಯೋಗೇಶ್ ನ್ಯಾಯಾಲಯದ ಮೊರೆಹೋಗಿದ್ದ. ಯೋಗೇಶ್ ಹತ್ಯೆ ಮಾಡಿದ್ರೆ ಉಳಿದವರು ಸೈಲೆಂಟ್ ಆಗುತ್ತಾರೆ ಎಂದು ಕೊಲೆ ಮಾಡಿದ್ದಾರೆ ಎಂಬುದು ಗ್ರಾಮಸ್ಥರ ಆರೋಪ.
ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ; ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ ಗಂಡ
ಕೊಲೆಯಾದ ಯೋಗೇಶ್ಗೆ ಮದುವೆ ಕೂಡ ನಿಶ್ಚಯವಾಗಿದ್ದು, ನೆಂಟರಿಷ್ಟರಿಗೆಲ್ಲ ಆಹ್ವಾನ ಪತ್ರಿಕೆ ನೀಡಲಾಯಿತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇದೇ ತಿಂಗಳು 21ರಂದು ಹಸೆಮಣೆ ಏರಬೇಕಿತ್ತು. ಆದರೆ ಅಣ್ಣನ ಅಟ್ಟಹಾಸಕ್ಕೆ ಮದುವೆಗೂ ಮೊದಲೇ ತಮ್ಮ ಬಲಿಯಾಗಿದ್ದಾನೆ. ಮದುವೆಯ ಆಹ್ವಾನ ಪತ್ರಿಕೆಯಲ್ಲಿ ಅಣ್ಣ ಲಿಂಗರಾಜು ಹೆಸರನ್ನೂ ಯೋಗೇಶ್ ಹಾಕಿಸಿದ್ದು, ಮುಂದೆ ನಿಂತು ಮದುವೆ ಮಾಡಬೇಕಿದ್ದ ಅಣ್ಣನೇ ತನ್ನ ಮಕ್ಕಳ ಜೊತೆ ಸೇರಿ ಯೋಗೇಶ್ ನ ಪರಲೋಕಕ್ಕೆ ಕಳುಹಿಸಿದ್ದಾನೆ. ಇನ್ನು ಸಿಟ್ಟಿಗೆದ್ದ ಗ್ರಾಮಸ್ಥರ ಘಟನೆ ಹಾಗೂ ಆರೋಪಿ ಲಿಂಗರಾಜು ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳನ್ನು ಧ್ವಂಸಗೊಳಿಸಿರುವ ಪ್ರಸಂಗವೂ ನಡೆದಿದೆ. ಸ್ಥಳಕ್ಕೆ ಮಂಡ್ಯ ಎಸ್ಪಿ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆರಗೋಡು ಪ್ರಕರಣ ದಾಖಲಿಸಿಕೊಂಡು ತಲೆ ಮರೆಸಿಕೊಂಡಿರುವ ಆರೋಪಿಗಳಿಗೆ ಶೋಧ ನಡೆಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 3:42 pm, ಶುಕ್ರ, 16 ಜನವರಿ 26