
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ನಿಮ್ಮಲ್ಲಿ ಕೆಲವರಿಗೆ ಈ ದಿನದ ಆರಂಭ ಅಷ್ಟೇನೂ ಚೆನ್ನಾಗಿರುವುದಿಲ್ಲ. ಆ ಕಾರಣಕ್ಕಾಗಿ ಎಂದಿನ ಉತ್ಸಾಹದಲ್ಲಿ ನೀವು ಕೇಳುವುದಿಲ್ಲ. ಉದ್ಯೋಗ ಅಥವಾ ವೃತ್ತಿಗೆ ಅಂದುಕೊಳ್ಳುವುದು ಕೆಲವು ಫಲಿತಾಂಶ ಬರುವುದರಿಂದ ವಿಚಲಿತರಾಗುವಂತೆ ಆಗಲಿದೆ. ಸ್ವಲ್ಪ ದೂರದ ಸ್ಥಳಕ್ಕೆ ಹೋಗಿ ಏಕಾಂಗಿಯಾಗಿ ಸಮಯ ಕಳೆಯೋಣ ಎಂದೆನಿಸಲಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕಾಗದ- ದಾಖಲೆ ಪತ್ರಗಳ ವ್ಯವಹಾರ ಸಲೀಸಾಗಿ ಆಗಲಿದೆ. ಇದಕ್ಕೆ ನಿಮ್ಮ ಪ್ರಭಾವ- ಸಹಾಯ ಮಾಡಲಿದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಪ್ಲಾನಿಂಗ್- ಪರಿಶ್ರಮ ಜೊತೆಯಾಗಿ ಅತ್ಯುತ್ತಮ ಫಲಿತಾಂಶ ದೊರೆಯಲಿದೆ. ದಂಪತಿ ಮಧ್ಯೆ ಸಂತೋಷಕರವಾದ ಸಮಯವನ್ನು ಕಳೆಯುವ ಯೋಗವಿದೆ. ನಿಮ್ಮ ಬಳಿ ಎಷ್ಟು ಹಣ ಇದೆಯೋ ಅಷ್ಟಕ್ಕೆ ಮಾತ್ರ ಸೀಮಿತಗೊಳ್ಳಿ. ಕಡಿಮೆ ಬಡ್ಡಿ- ದೀರ್ಘಾವಧಿ ಹೀಗೆ ಏನೇ ಆದರೂ ಸಾಲ ಪಡೆದುಕೊಳ್ಳಬೇಡಿ. ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಎಷ್ಟು ಸಣ್ಣ ಪ್ರಮಾಣದ ಕೆಲಸವಾದರೂ ನೀವೇ ಪೂರ್ಣಗೊಳಿಸುವುದು ಉತ್ತಮ. ನಿಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ವರ್ಗಾವಣೆ ಮಾಡಬೇಡಿ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ನಿಮ್ಮ ಕೆಲಸ- ಜವಾಬ್ದಾರಿ ಅಷ್ಟಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳಿ. ಸ್ನೇಹ- ಕರುಣೆ ಹೀಗೆ ಭಾವನಾತ್ಮಕವಾಗಿ ತಳುಕು ಹಾಕಿಕೊಂಡು, ಇತರರಿಗೆ ನೆರವು ನೀಡಲು ಮುಂದಾದಾಗ ಆ ನಂತರ ಪಡಿಪಾಟಲು ಪಡುವಂತೆ ಆಗುತ್ತದೆ. ಉಳಿತಾಯದ ಉದ್ದೇಶಕ್ಕಾಗಿ ಖರೀದಿಸಿದ ಚಿನ್ನ ಅಥವಾ ಬೆಳ್ಳಿಯನ್ನು ಮಾರಾಟ ಮಾಡಿ, ಸದ್ಯದ ಹಣಕಾಸಿನ ಅಗತ್ಯವನ್ನು ಪೂರೈಸಲು ಯೋಚಿಸುತ್ತೀರಿ. ಮ್ಯೂಚುವಲ್ ಫಂಡ್ ನಲ್ಲಿ ಹಣ ಹೂಡಿಕೆ ಮಾಡಿದವರಿಗೆ ಲಾಭ ಸಿಗಲಿದೆ. ಪ್ರಾಫಿಟ್ ಬುಕ್ಕಿಂಗ್ ಗೆ ನಿರ್ಧಾರ ಮಾಡುತ್ತೀರಿ.
ಲೇಖನ- ಸ್ವಾತಿ ಎನ್.ಕೆ.