Headlines

ವಲಸಿಗರ ಶೆಡ್​ಗೆ ನುಗ್ಗಿ ಬೆದರಿಕೆ: ಪುನೀತ್​ ಕೆರೆಹಳ್ಳಿಗೆ ಜಾಮೀನು; ಹೋರಾಟ ಆರಂಭವೆಂದ ಹಿಂದೂ ಕಾರ್ಯಕರ್ತ

ವಲಸಿಗರ ಶೆಡ್​ಗೆ ನುಗ್ಗಿ ಬೆದರಿಕೆ: ಪುನೀತ್​ ಕೆರೆಹಳ್ಳಿಗೆ ಜಾಮೀನು; ಹೋರಾಟ ಆರಂಭವೆಂದ ಹಿಂದೂ ಕಾರ್ಯಕರ್ತ


ಆನೇಕಲ್, ಜನವರಿ 17: ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಪೌರತ್ವ ದಾಖಲೆಗಳನ್ನು ಪರಿಶೀಲಿಸಿ ಪೊಲೀಸ್ ಗಿರಿ ಆರೋಪದ ಹಿನ್ನೆಲೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನ (ಪುನೀತ್ ಕೆರೆಹಳ್ಳಿ) ಬಂಧಿಸಿದ್ದರು. ಕೆರೆಹಳ್ಳಿ ಬಂಧನದ ಬಳಿಕ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಬೆನ್ನಲ್ಲೇ ಇದೀಗ ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮತ್ತವರ ತಂಡ ಕಳೆದ ಕೆಲ ದಿನಗಳಿಂದ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯಾಚರಣೆ ನಡೆಸುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಬಿಂಗೀಪುರ ಗ್ರಾಮದಲ್ಲಿ ಶಂಕಿತ ಬಾಂಗ್ಲಾ ವಲಸಿಗರು ಇರುವ ಬಗ್ಗೆ ಪುನೀತ್ ಕೆರೆಹಳ್ಳಿ ತಂಡವಿತ್ತು. ಅಲ್ಲಿದ್ದ ವಲಸೆ ಕಾರ್ಮಿಕರ ದಾಖಲೆಗಳ ಪರಿಶೀಲನೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ

ಇದಾದ ಬಳಿಕ ಜಾಗದ ಮಾಲೀಕ ಸಿದ್ದೇಶ್ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ ಇತರರ ವಿರುದ್ಧ ವಲಸೆ ಕಾರ್ಮಿಕರ ಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಬನ್ನೇರುಘಟ್ಟ ಪೊಲೀಸರು ತಡರಾತ್ರಿ ಪುನೀತ್ ಕೆರೆಹಳ್ಳಿಯನ್ನ ಬಂಧಿಸಿ ಠಾಣೆಗೆ ಕರೆತಂದಿದ್ದರು. ವಿಷಯ ತಿಳಿಯದಂತೆ ನಂತರ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಬೇಕೆಂದು ಬಾಂಗ್ಲಾ ವಲಸಿಗರಿಗೆ ಇರಲು ಜಾಗದ ಮಾಲೀಕರ ಮೇಲೆ ಕ್ರಮವಾಗಿ ಒತ್ತಾಯಿಸಿದರು.

ಇನ್ನು ಪುನೀತ್ ಕೆರೆಹಳ್ಳಿಯನ್ನ ವಿಚಾರಣೆ ನಡೆಸಿದ ಬನ್ನೇರುಘಟ್ಟ ಪೊಲೀಸರು ತದನಂತರ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸದ್ಯ ಪುನೀತಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದರೆ ತಲಾ 10 ಸಾವಿರ ರೂ ನಗದು ಶ್ಯೂರಿಟಿ ಹಾಗೂ ಪರ್ಸನಲ್ ಬಾಂಡ್ ಷರತ್ತು ವಿಧಿಸಲಾಗಿದೆ.

ಬಾಂಗ್ಲಾ ವಲಸಿಗರ ವಿರುದ್ಧ ನಮ್ಮ ಹೋರಾಟ ಹೋರಾಟ: ಪುನೀತ್ ಕೆರೆಹಳ್ಳಿ

ಜಾಮೀನು ಕೋರ್ಟ್‌ನಿಂದ ಹೊರಬರಲು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಇನ್ನೂ ಜಾಮೀನು ಸಿಕ್ಕ ಬಳಿಕ ಮಾತನಾಡಿದ ಪುನೀತ್ ಕೆರೆಹಳ್ಳಿ, ಬಾಂಗ್ಲಾ ವಲಸಿಗರ ವಿರುದ್ಧ ನಮ್ಮ ಹೋರಾಟ ಅಂತ್ಯ ಅಲ್ಲ, ಇಂದಿನಿಂದಲೇ ಹೋರಾಟ ಆರಂಭವಾಗಿದೆ. ಕಾಂಗ್ರೆಸ್ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರ ಪರವಾಗಿದೆ, ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಹಚ್ಚುವ ಕೆಲಸ ಮಾಡಿದ್ದೇವೆ. ಎಡಪಂಥೀಯರ ಒತ್ತಡಕ್ಕೆ ಮಣಿದು ಸರ್ಕಾರ ರಾತ್ರಿ ವೇಳೆ ಬಂಧಿಸಿದೆ. ಠಾಣೆಯಲ್ಲೇ ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳಿವೆ, ಅದ್ರೂ ಕೂಡ ಬಂಧನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಸಿಟಿ ಉಪವಿಭಾದಲ್ಲಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರು ಪತ್ತೆ

ಸದ್ಯ ಪುನೀತಹಳ್ಳಿ ಮತ್ತವರ ತಂಡಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಬಾಂಗ್ಲಾ ವಲಸಿಗರ ವಿರುದ್ಧ ಹೋರಾಟ ನಿಲ್ಲುವುದಿಲ್ಲ. ಇನ್ನೊಂದೆಡೆ ವಲಸೆ ಕಾರ್ಮಿಕರಿಗೆ ಪುನೀತ್ ಕೆರೆಹಳ್ಳಿ ತಂಡ ಬೆದರಿಕೆ ಹಾಕುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸರ್ಕಾರ ಮತ್ತು ಯಾವ ರೀತಿ ಕ್ರಮಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *