ಬೆಂಗಳೂರು, ಜನವರಿ 18: ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ಇಂದು ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಚಲಿಸುತ್ತಿದ್ದ ಕಾರೊಂದಕ್ಕೆ ಮಧ್ಯರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ಕಾರಿನ ಒಳಭಾಗದಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರಿನಿಂದ ಇಳಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಕ್ಷಣ ಪ್ರತಿಕ್ರಿಯಿಸಿ ಕಾರಿಗೆ ಹೊತ್ತಿದ್ದ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಕಾರಿಗೆ ಬೆಂಕಿ ಹೊತ್ತಿಕೊಂಡ ಕಾರಣ ತಿಳಿದುಬಂದಿಲ್ಲ.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.