ಬೆಂಗಳೂರು, ಜನವರಿ 19: ಲಂಚ ಪಡೆವಾಗ ಅಬಕಾರಿ ಡಿಸಿ ಜಗದೀಶ್ ನಾಯಕ ಬಂಧನ ಪ್ರಕರಣ ಸಂಬಂಧ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರಕ್ಕೆ ಸಂಕಷ್ಟದ ಸಾಧ್ಯತೆ ಇದೆ. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಲಕ್ಷ್ಮೀನಾರಾಯಣ ಎಂಬವರು ದೂರು ನೀಡಿದ್ದು, ಪ್ರಕರಣದಲ್ಲಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಅಬಕಾರಿ ಡಿಸಿ ಜಗದೀಶ್ ಮಾತಾಡಿದ್ದ ಆಡಿಯೋವನ್ನು ಸಹ ಲಕ್ಷ್ಮೀ ನಾರಾಯಣ ಬಿಡುಗಡೆ ಮಾಡಿದರು. ಹೀಗಾಗಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆಯೂ ದೂರು ನೀಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.