ಬೆಂಗಳೂರು, ಜ.20: ಡಿಜಿಪಿ ರಾಮಚಂದ್ರರಾವ್ ಅವರಿಗೆ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣ ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಡಿಯೋ ಕೂಡ ಸಾರ್ವಜನಿಕವಾಗಿ ಹರಿದಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾಕ್ಟರ್ ಎಂ.ಎಸ್. ಸಲೀಂ ಅವರಿಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕಾಗಿ ಸೂಚನೆ ನೀಡಿದ್ದರು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಜಿಪಿ ರಾಮಚಂದ್ರರಾವ್, ಈ ಐ ಸೃಷ್ಟಿ ಮತ್ತು ತಮ್ಮ ವಿರುದ್ಧದ ಷಡ್ಯಂತ್ರ ಎಂದು ಸ್ಪಷ್ಟೀಕರಣ ನೀಡಿದ್ದರು. ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅವರನ್ನು ಅಮಾನತುಗೊಳಿಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ