Headlines

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು


ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ!

ಬೆಂಗಳೂರು, ಜನವರಿ 20: ದ್ವಿತೀಯ ಪಿಯುಸಿ ಶಿಕ್ಷಣ ಇಲಾಖೆ (ಕರ್ನಾಟಕ ಶಿಕ್ಷಣ ಇಲಾಖೆ) ಬಿಗ್ ಶಾಕ್ ನೀಡಿದ್ದು, ಈವರೆಗೆ ನೀಡುತ್ತಿದ್ದ ಸ್ಟೇಡಿ ಹಾಲಿಡೇಗೆ (ಅಧ್ಯಯನ ರಜೆ) ಬ್ರೇಕ್ ಹಾಕಿದೆ. ಪಿಯು ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡ ಪ್ರಗತಿ ಪದವಿ ಪೂರ್ವ ಶಿಕ್ಷಣ ಇಲಾಖೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಿದ್ದರು.

ಒಂದು ತಿಂಗಳ ಸ್ಟಡಿ ಹಾಲಿಡೇಗೆ ಬ್ರೇಕ್

ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ನಂತರ ಸುಮಾರು ಒಂದು ತಿಂಗಳ ಕಾಲ ಸ್ಟಡಿ ಹಾಲಿಡೇ ನೀಡಲಾಗುತ್ತದೆ. ಆದರೆ ಈ ವ್ಯವಸ್ಥೆಯಿಂದ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ ಎಂಬ ಕಾರಣದಿಂದ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಫೆಬ್ರುವರಿ 26ರವರೆಗೆ ಕಾಲೇಜುಗಳನ್ನು ನಡೆಸಲು ಇಲಾಖೆ ನಿರ್ಧರಿಸಿದ್ದು, ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಉಪಾನ್ಯಾಸಕರ ನೇತೃತ್ವದಲ್ಲಿ ಮುಖ್ಯ ಪರೀಕ್ಷೆಗೆ ಸಿದ್ಧಪಡಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ ಶಾಲಾ ಮಕ್ಕಳಿಗೆ ಈ ಬಾರಿ ಶೂ ಬದಲು ಚಪ್ಪಲಿ ಭಾಗ್ಯ? ಶಿಕ್ಷಣ ಇಲಾಖೆಯಿಂದ ಹೊಸ ಯೋಜನೆ!

ಫಲಿತಾಂಶ ಸುಧಾರಣೆಗಾಗಿ ಈ ಮಹತ್ವದ ನಿರ್ಧಾರ

ಉಪನ್ಯಾಸಕರ ನೇತೃತ್ವದಲ್ಲಿ ಗ್ರೂಪ್ ಸ್ಟಡಿ ವ್ಯವಸ್ಥೆ ಜಾರಿಗೊಳಿಸಲು ಇಲಾಖೆ ಮುಂದಾಗಿದೆ. ಪಠ್ಯ ಪುನರವಲೋಕನ, ಅನುಮಾನ ನಿವಾರಣೆ, ಪ್ರಶ್ನೋತ್ತರ ಚರ್ಚೆಗಳ ಮೂಲಕ ವಿದ್ಯಾರ್ಥಿಗಳ ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ಕಾಲೇಜುಗಳಿಗೆ ಸೂಚಿಸಲಾಗಿದೆ. ಜೊತೆಗೆ ಉಪನ್ಯಾಸಕರು ಕೂಡ ಪರೀಕ್ಷೆ ಮುಗಿಯುವವರೆಗೂ ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ. ಈ ಹೊಸ ಕ್ರಮದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗಲಿದೆ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡುಬರುತ್ತದೆ ಎಂಬ ವಿಶ್ವಾಸವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಕ್ತಪಡಿಸಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *