Headlines

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ


ಬೆಂಗಳೂರು, (ಜನವರಿ 20): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ (ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ) ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ (ಈಶ್ವರ ಖಂಡ್ರೆ) ಆಯ್ಕೆ ಮಾಡಲಾಗಿದೆ. ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ಅಧ್ಯಕ್ಷ ಸ್ಥಾನಕ್ಕೆ ಹಲವು ಘಟಾನುಘಟಿ ನಾಯಕರ ಹೆಸರು ಕೇಳಿಬಂದಿತ್ತು. ಆದರೆ, ಅಂತಿಮವಾಗಿಂದ (ಜನವರಿ 20) ಬೆಂಗಳೂರಿನ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಈಶ್ವರ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧ್ಯಕ್ಷ ಎನ್ನಿಸಿಕೊಂಡಿದ್ದಾರೆ.

ಈ ಹಿಂದೆ ಈಶ್ವರ ಖಂಡ್ರೆ ಅವರ ತಂದೆ ಭೀಮಣ್ಣ ಖಂಡ್ರೆ ಕೂಡ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ. ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಗೆ ಶಾಮನೂರು ಶಿವಶಂಕರಪ್ಪ ಅಧ್ಯಕ್ಷರು. ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಸ್ಥಾನಕ್ಕೆ ಈಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಕೂಡ ಕೇಳಿ ಬಂದಿತ್ತು. ಲಿಂಗಾಯತ ಪಂಚಪೀಠದ ಪೀಠಾಧಿಪತಿಗಳೊಬ್ಬರು ಯಡಿಯೂರಪ್ಪ ಅವರು ವೀರಶೈವ ಮಹಾಸಭಾದ ಅಧ್ಯಕ್ಷರಾದರೇ, ಸಂತೋಷ ಎಂದು ಸಹ ಬಹಿರಂಗವಾಗಿಯೇ ಹೇಳಿದ್ದಾರೆ. ಆದರೆ, ಈಗ ಕೊನೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಭಾಲ್ಕಿ ಕ್ಷೇತ್ರದ ಶಾಸಕ, ರಾಜ್ಯದ ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಸದಾಶಿವ ನಗರದ ಅಖಿಲ ಭಾರತ ವೀರಶೈವ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಶರಣಬಸಪ್ಪ ದರ್ಶನಪುರ, ಪ್ರಭಾಕರ್ ಕೋರೆ, ವೀರಣ್ಣ ಚರಂತಿಮಠ, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ ಕಾರ್ಯಕಾರಿ ಮಂಡಳಿ ಸದಸ್ಯರು ಭಾಗವಹಿಸಿದ್ದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *