ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು

ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು


ಮಂಗಳೂರು, ಜನವರಿ 20: ಧರ್ಮಸ್ಥಳದ (ಧರ್ಮಸ್ಥಳ) ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಪ್ರಕರಣಕ್ಕೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಸ್‌ಐಟಿ ಅಧಿಕಾರಿಗಳು ಎಫ್‌ಎಸ್‌ಎಸ್‌ಎಲ್‌ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ ಎಸ್ ಎಸ್ ಎಲ್ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಮಾನವನ 7 ಅಸ್ಥಿಪಂಜರಗಳ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್ ಐಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಮಾನವನ 7 ಅಸ್ಥಿಪಂಜರ ಇತ್ತು. 2025 ರ ಸೆಪ್ಟೆಂಬರ್ 17 ರಂದು 5 ಮತ್ತು ಸೆ.18 ರಂದು 2 ಒಟ್ಟು ಏಳು ಅಸ್ಥಿಪಂಜರಗಳನ್ನು ಎಸ್‌ಐಟಿ ಅಧಿಕಾರಿಗಳು ಗುರುತಿಸಿದ್ದರು.

ಇದನ್ನೂ ಓದಿ: ಬುರುಡೆ ಕೇಸ್‌ಗೆ ಎಂಟ್ರಿಕೊಟ್ಟ ಶ್ರೀಕ್ಷೇತ್ರ ಧರ್ಮಸ್ಥಳ: ಕೋರ್ಟ್‌ನಲ್ಲಿ ವಕಾಲತ್ತು ಸಲ್ಲಿಕೆ

ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಸ್ಥಿಪಂಜರಗಳು ಇದ್ದವು. ಸದ್ಯ ಹೆಚ್ಚಿನ ತನಿಖೆಗಾಗಿ ಬೆಳ್ತಂಗಡಿ ಎಸ್ ಐಟಿ ಕಚೇರಿಯಿಂದ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ ಎಸ್ ಎಸ್ ಎಲ್ ಕಚೇರಿಗೆ ಅಸ್ಥಿಪಂಜರಗಳನ್ನು ರವಾನಿಸಲಾಗಿದೆ.

ಇನ್ನು ಅಸ್ಥಿಪಂಜರದ ಜಾಡು ಹಿಡಿದು ಹೊರಟ್ಟಿದ್ದ ಎಸ್ ಐಟಿ ಮಹತ್ವದ ಮಾಹಿತಿ ಕಲೆ ಹಾಕಿತ್ತು. ಇದ್ದಿದ್ದ 7 ಬುರುಡೆಗಳ ಮೇಲೊಂದು ಬುರುಡೆ ಕೊಡಗಿನ ಯು.ಬಿ.ಅಯ್ಯಪ್ಪ ಎಂಬುದು ಖಚಿತವಾಗಿತ್ತು. ಅಸ್ಥಿಪಂಜರ ಪತ್ತೆಯಾದ ಜಾಗದಲ್ಲಿ ಹಿರಿಯ ನಾಗರಿಕರೊಬ್ಬರ ಗುರುತಿನ ಚೀಟಿ ಇತ್ತು. ಜೊತೆಗೆ ಟ್ರೈ ಲೆಗ್ ಬ್ಯಾಲೆನ್ಸ್ ವಾಕಿಂಗ್ ಸ್ಟಿಕ್ ಕೂಡ ಇತ್ತು.

ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ಗೆ ಮೇಜರ್ ಟ್ವಿಸ್ಟ್: ಎಸ್‌ಐಟಿ ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

ಗುರುತಿನ ಚೀಟಿ ಕೊಡಗು ಮೂಲದ ಯು.ಬಿ. ಅಯ್ಯಪ್ಪ ಎಂಬುವವರಿಗೆ ಸೇರಿದ್ದಾಗಿತ್ತು. ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ ಅಯ್ಯಪ್ಪ ಏಳು ವರ್ಷಗಳ ಹಿಂದೆಯೇ ಕಾಣೆಯಾಗಿದ್ದರು. ಮೈಸೂರಿಗೆ ಚಿಕಿತ್ಸೆಗೆಂದು ತೆರಳಿದವರು ನಾಪತ್ತೆಯಾಗಿದ್ದರು. ಅಯ್ಯಪ್ಪ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಈ ವೇಳೆ ಅವರ ಬಳಿ ತ್ರಿ ಲೆಗ್ ಬ್ಯಾಲೆನ್ಸ್ ವಾಕಿಂಗ್ ಸ್ಟಿಕ್ ಇದ್ದಿದ್ದಾಗಿ ನಮೂದಿಸಲಾಗಿದೆ. ಇಲ್ಲ ಆ ಅಸ್ಥಿಪಂಜರ ಅಯ್ಯಪ್ಪ ಅವರದ್ದೇ ಎಂದು ಎಸ್ ಐಟಿ ಶಂಕಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 5:49 pm, ಮಂಗಳವಾರ, 20 ಜನವರಿ 26



Source link

Leave a Reply

Your email address will not be published. Required fields are marked *