ಮಹಿಳೆಯರ ಒಳ ಉಡುಪು ಕದ್ದು ವಿಕೃತಾನಂದ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಸೈಕೋ ಯುವಕ

ಮಹಿಳೆಯರ ಒಳ ಉಡುಪು ಕದ್ದು ವಿಕೃತಾನಂದ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಸೈಕೋ ಯುವಕ


ಬೆಂಗಳೂರು, (ಜನವರಿ 20): ಇತ್ತೀಚೆಗೆ ಕರ್ನಾಟಕದಲ್ಲಿ (ಕರ್ನಾಟಕ) ಬ್ಯಾಂಕ್, ಎಟಿಎಂ ದರೋಡೆ ಪ್ರಕರಣಗಳು ನಡೆದಿವೆ. ಇದರ ಜೊತೆಗೆ ಮಹಿಳೆಯರ ಒಳ ಉಡುಪು ಕಳ್ಳತನ ಪ್ರಕರಣಗಳು ಸಹ ಬೆಳಕಿಗೆ ಬರುತ್ತಿವೆ. ಕಳೆದ ಸೆಪ್ಟೆಂಬರ್ ನಲ್ಲಿ ಹುಬ್ಬಳ್ಳಿಯಲ್ಲಿ (ಹುಬ್ಬಳ್ಳಿ) ಮಹಿಳೆಯರ ಒಳ ಉಡುಪುಗಳನ್ನು ಕಡಿಯುತ್ತಿದ್ದ ಸೈಕೋ ಕಳ್ಳ ಸಿಕ್ಕಿಬಿದ್ದಿದ್ದ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲೂ ಸಹ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಹೌದು… ಮಹಿಳೆಯರು ಮತ್ತು ಯುವತಿಯರ ಉಡುಪುಗಳನ್ನು ಕದ್ದು ವಿಲಕ್ಷಣವಾಗಿ ವರ್ತಿಸುತ್ತಿದ್ದ ‘ಸೈಕೋ’ ಕಳ್ಳ ಇದೀಗ ಬೆಂಗಳೂರಿನ (ಬೆಂಗಳೂರು) ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕೇರಳ ಮೂಲದ ಅಮಲ್(23) ಬಂಧಿತ ಆರೋಪಿ.

ಕೇರಳ ಮೂಲದ 23 ವರ್ಷದ ಅಮಲ್, ಮನೆ ಮಹಡಿ, ಹಾಗೂ ಆಚೆ ಒಣಹಾಕಿರುವ ಮಹಿಳೆಯರ ಒಳಉಡುಪುಗಳನ್ನು ಕಡಿಯುತ್ತಿದ್ದ. ಬಳಿಕ ಧರಿಸಿಕೊಂಡು ಫೋಟೋ ತೆಗೆದುಕೊಂಡೆ ವಿಕೃತ ಆನಂದ ಪಡುತ್ತಿದ್ದ.

ಇದನ್ನೂ ಓದಿ: ಮಹಿಳೆಯರ ಒಳ ಉಡುಪು ಕದ್ದು ವಿಕೃತಾನಂದ: ಹುಬ್ಬಳ್ಳಿಯಲ್ಲಿ ಸೈಕೋ ವ್ಯಕ್ತಿ ಅಂದರ್

ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ವಿಕೃತ ಕಾಮಿಲ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಕದ್ದ ಒಳ ಉಡುಪು ಧರಿಸಿ ಫೋಟೋ ಕ್ಲಿಕ್ಕಿಸಿಕೊಂಡಿರುವುದು ಮೊಬೈಲ್ ನಲ್ಲಿದೆ. ಹಾಗೆಯೇ ಅಮಲ್ ವಾಸವಿದ್ದ ಮನೆಯಲ್ಲಿಯೂ ಸಹ ಮಹಿಳೆಯರ ಒಳ ಉಡುಪುಗಳನ್ನು ಇಟ್ಟುಕೊಂಡಿರುವುದು ಕಂಡುಬಂದಿದೆ. ಸದ್ಯ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *