Headlines

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ


ಬೆಂಗಳೂರು, (ಜನವರಿ 20): ಇದೇ ಜೂನ್ 30 ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆಗೆ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಜಿಬಿಎ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್ ಅವರನ್ನು ನೇಮಿಸಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಾಧ್ಯ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಹೀಗಾಗಿ ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನೇ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಇನ್ನುಳಿದಂತೆ ರಾಜಸ್ಥಾನದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹಾಗೂ ಮಹಾರಾಷ್ಟ್ರ ಬಿಜೆಪಿ ಶಾಸಕರಾದ ಸಂಜಯ್ ಉಪಾಧ್ಯಾಯ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

ಇದನ್ನೂ ನೋಡಿ: ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರ ಏನು? ಹೆಚ್ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಇಂದು (ಜನವರಿ 20) ದೆಹಲಿಯ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದರ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿ ಹಾಗೂ ಸಹುಸ್ವಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷದ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿ

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟದ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಚುನಾವಣೆಗೆ ಸ್ವತಂತ್ರವಾಗಿ ಸಂಸ್ಥೆ ಹೇಳಿಕೆ ನೀಡಿದ್ದರು. ಈ ಸೃಷ್ಟಿಯ ಗೊಂದಲವನ್ನು ಪರಿಹರಿಸಲು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಸಭೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಾಳಿ ಎಂದು ಘೋಷಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 11:22 pm, ಮಂಗಳವಾರ, 20 ಜನವರಿ 26





Source link

Leave a Reply

Your email address will not be published. Required fields are marked *