Headlines

ಬೆಂಗಳೂರು: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್​​​ನಲ್ಲೇ ಅಪಸ್ವರ!

ಬೆಂಗಳೂರು: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್​​​ನಲ್ಲೇ ಅಪಸ್ವರ!


ಬೆಂಗಳೂರು, ಜನವರಿ 21: ಸುಪ್ರೀಂ ಕೋರ್ಟ್ ಸೂಚನೆ ಬೆನ್ನನ್ನೇ ಜಿಬಿಎ (GBA) ಚುನಾವಣೆಯ ತಯಾರಿ ಬಿರುಸಿನಿಂದ ಸಾಗಿದೆ. ಜಿಬಿಎ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ತಯಾರಿಸುತ್ತಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಆಯೋಗ ನಿರ್ಧಾರ ಮಾಡಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ ನಲ್ಲೇ (ಕಾಂಗ್ರೆಸ್) ಅಪಸ್ವರ ಎದ್ದಿದೆ. ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ನಾವು ಒಂದು ಹೆಜ್ಜೆ ಮುಂದೆ ಹೋಗಿದ್ದೇವೆ. ಮತ್ತೆ ಬ್ಯಾಲೆಟ್ ಪೇಸ್ಟ್ ಮಾಡುವುದು ಬೇಡ ಎನಿಸುತ್ತಿದೆ.

ಮತ್ತೆ ಹಿಂದಕ್ಕೆ ಹೆಜ್ಜೆ ಹಾಕೋದು ಬೇಡ: ಇವಿಎಂ ಪರ ಡಿಕೆ ಸುರೇಶ್ ಬ್ಯಾಟ್

ರಾಜ್ಯದಲ್ಲಿ ಚುನಾವಣೆಗಳನ್ನು ನಡೆಸುವುದು ನಾವೇ. ನಮ್ಮದೇ ಸರ್ಕಾರ ಇದೆ. ಹೀಗಾಗಿ ಅಕ್ರಮ ನಡೆಯುತ್ತಿದೆ ಎಂದು ಹೇಳಲಾಗದು. ಕೇಂದ್ರದಲ್ಲಾದರೆ ಬೇರೆ ವಿಚಾರ. ನಾವಿಗಾಗಲೇ ಒಂದು ಹೆಜ್ಜೆ ಮುಂದೆ ಹೋಗಿದ್ದರೆ ಮತ್ತೆ ಹಿಂದಕ್ಕೆ ಬರುವ ಅಗತ್ಯ ಇಲ್ಲ ಎನಿಸುತ್ತದೆ. ಈ ಹೆಚ್ಚು ವಿಶ್ಲೇಷಣೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.

ಏತನ್ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಇವಿಎಂನಿಂದ ಮತಗಳ್ಳತನ ಆಗುತ್ತಿದೆ. ಹೀಗಾಗಿ ಬ್ಯಾಲೆಟ್ ಪೇಪರ್ ಒಳ್ಳೆಯದು ಎಂದು ಹೇಳಿದ್ದಾರೆ. ಮತಗಳ್ಳತನ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ಬ್ಯಾಲೆಟ್ ಪೇಪರ್ ಚುನಾವಣೆ ಮಾಡಿದರೆ ಒಳ್ಳೆಯದು.

ಬ್ಯಾಲೆಟ್ ಪೇಪರ್ ಬಳಸಿದರೂ ಬಿಜೆಪಿ ಗೆಲ್ಲೋದು ಪಕ್ಕಾ: ಅಶೋಕ್

ಇವಿಎಂ ತಂದಿದ್ದೇ ಕಾಂಗ್ರೆಸ್, ಈಗ ಅವರಿಗೆ ನಂಬಿಕೆ ಇಲ್ವಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಬ್ಯಾಲೆಟ್ ಪೇಪರ್ ಆದರೂ ತರಲಿ, ಏನಾದರೂ ತರಲಿ. ಜಿಬಿಎ ಚುನಾವಣೆಯಲ್ಲಿ ಬಿಜೆಪಿನೇ ಗೆಲ್ಲೋದು.

ಹೆಚ್.ಕೆ.ಪಾಟೀಲ್, ಸಿಟಿ ರವಿ ಮಧ್ಯೆ ಐವಿಎಂ ಫೈಟ್

ನಮಗೆ ಇವಿಎಂ ಮೇಲೆ ಅನುಮಾನವಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟ ಪರಿಷತ್ ಸದಸ್ಯ ಸಿ.ಟಿ.ರವಿ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದು ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದೆಡೆ, ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಿಕೊಂಡರೆ ತಪ್ಪೇನಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಇಡೀ ವಿಶ್ವದಲ್ಲಿ ಎಲ್ಲಾ ಕಡೆ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸುತ್ತಿದ್ದಾರೆ. ನಮ್ಮಲ್ಲಿ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದರು.

ರಾಹುಲ್ ಮೆಚ್ಚಿಸಲು ಬ್ಯಾಲೆಟ್ ಪೇಪರ್ ಬಳಕೆ: ಸದಾನಂದ ಗೌಡ

ಬ್ಯಾಲೆಟ್ ಪೇಪರ್ ಬಳಕೆಯಿಂದ ಗೊಂದಲವಾಗುತ್ತದೆ ಎಂದು ಮಾಜಿ ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ತಾಂತ್ರಿಕವಾಗಿ ಮುಂದುವರಿಯುವ ವೇಳೆ ಹೀಗೆ ಮಾಡಬಾರದು. ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪಾಲಿಕೆ ಆಯುಕ್ತರ ಉಪಸ್ಥಿತಿಗೆ ಬಿಜೆಪಿ ಆಕ್ಷೇಪ

ರಾಜ್ಯ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಪಾಲಿಕೆ ಆಯುಕ್ತರ ಉಪಸ್ಥಿತಿಗೆ ಆಕ್ಷೇಪವಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯೂ ಆಗಿರುವ ರಾಜೇಂದ್ರ ಚೋಳನ್ ಭಾಗವಹಿಸಿದ್ದಕ್ಕೆ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯುಕ್ತರ ಜತೆ ಕುಳಿತುಕೊಳ್ಳುವುದೆಷ್ಟು ಸೂಕ್ತ? ಇದು ಹಿತಾಸಕ್ತಿಗಳ ಸಂಘರ್ಷ ಆಗುವುದಿಲ್ಲ ಎಂದು ಸುರೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *