Headlines

Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ

Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ


ಬೆಂಗಳೂರು, ಜನವರಿ 22: ನರೇಗಾ (NREGA) ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ (ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನ) ಕೂಡ ರಾಜ್ಯಪಾಲರು (ಕರ್ನಾಟಕ ರಾಜ್ಯಪಾಲರು) ಮತ್ತು ಸರ್ಕಾರದ ವಿರುದ್ಧ ಸಂಘರ್ಷಕ್ಕೆ ಕಾರಣವಾಯಿತು. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುತ್ತಾರೆಯೇ ಎಂಬ ಅನುಮಾನವಿತ್ತು. ಆದರೆ, ಇದನ್ನು ಹುಸಿ ಮಾಡಿದ ರಾಜ್ಯಪಾಲರು, ಕೇವಲ ಸರ್ಕಾರದ ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಓದಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿಧಾನಸಭೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು.

ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ 11 ಅಂಶಗಳನ್ನು ತೆಗೆಯುವಂತೆ ರಾಜ್ಯಪಾಲರು, ಬುಧವಾರ ಸೂಚಿಸಿದ್ದರು. ಆದರೆ, ಅದನ್ನು ಸರ್ಕಾರ ನಿರಾಕರಿಸಿತ್ತು. ಹೀಗಾಗಿ ರಾಜ್ಯಪಾಲರು ಭಾಷಣ ಮಾಡಲು ಬರುವುದು ಅನುಮಾನ ಎಂದು ಹೇಳಿದರು. ಒಂದು ವೇಳೆ ರಾಜ್ಯಪಾಲರು ವಿಧಾನಸಭೆಗೆ ಬಾರದಿದ್ದರೆ ಮುಂದಿನ ಕಾನೂನು ಕ್ರಮಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಕ್ಕೆ ಕೂಡ ಸರ್ಕಾರ ಸಿದ್ಧತೆ ನಡೆಸಿತ್ತು.

ರಾಜ್ಯಪಾಲರು ಮಾಡಿದ್ದೇನು?

ಆಡಳಿತಾರೂಢ ಕಾಂಗ್ರೆಸ್ ನಾಯಕರ ನಿರೀಕ್ಷೆಗಳನ್ನು ಹುಸಿ ಮಾಡಿದ ರಾಜ್ಯಪಾಲರು, ವಿಧಾನಸಭೆಗೆ ಬಂದು ಭಾಷಣ ಆರಂಭಿಸಿದರು. ಸರ್ಕಾರ ಸಿದ್ಧಪಡಿಸಿದ ಭಾಷಣದ ಮೊದಲ ಮತ್ತು ಕೊನೆಯ ಪ್ಯಾರದ ಲೈನ್ ಮಾತ್ರ ಓದಿ, ಶುಭಾಶಯ ಕೋರಿ ಸರ್ಕಾರಕ್ಕೆ ಶಾಕ್ ಕೊಟ್ಟರು. ಬಳಿಕ ಅಲ್ಲಿಂದ ನಿರ್ಗಮಿಸಿದರು.

ವಿಧಾನಸಭೆಯಲ್ಲಿ ಹೈಡ್ರಾಮಾ

ರಾಜ್ಯಪಾಲರು ನಿರ್ಗಮಿಸುತ್ತಿದ್ದಂತೆಯೇ ಅವರನ್ನು ತಡೆಯಲು ಎಂಎಲ್ಸಿ ಬೈಕ್ ಹರಿಪ್ರಸಾದ್ ಮುಂದಾದರು. ಕಾಂಗ್ರೆಸ್ ಪಕ್ಷದ ಶಾಸಕರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ, ವಿಧಾನಸಭೆಯಲ್ಲಿ ಹೈಡ್ರಾಮವೇ.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ)

ರಂದು ಪ್ರಕಟಿಸಲಾಗಿದೆ – 11:27 am, ಗುರುವಾರ, 22 ಜನವರಿ 26



Source link

Leave a Reply

Your email address will not be published. Required fields are marked *