ರಾಜ್ಯಪಾಲರ ನಡೆಗೆ ಕಾಂಗ್ರೆಸಿಗರ ಆಕ್ರೋಶ
ಬೆಂಗಳೂರು, ಜನವರಿ 22: ಇಂದಿನಿಂದ ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನ ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸರ್ಕಾರ ಓದಿದೆ, ಕೇವಲ ಎರಡು ಸಾಲು ಓದಿ ಅಧಿವೇಶನದಿಂದ ಹೊರನಡೆದಿದೆ. ಗವರ್ನರ್ ನಡೆಗೆ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಪಾಲರ ನಿರ್ಗಮನ ವೇಳೆ ಘೋಷಣೆ ಕೂಗುವ ಮೂಲಕ ವಿರೋಧ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಹೀಗಾಗಿ ಜಂಟಿ ಅಧಿವೇಶನ ಹೈಡ್ರಾಮಾಗೆ ಸಾಕ್ಷಿಯಾಗಿದೆ.
ಗವರ್ನರ್ ಅಡ್ಡಗಟ್ಟಿದ ಹರಿಪ್ರಸಾದ್
ಕೇವಲ ಎರಡು ಸಾಲು ಭಾಷಣ ಮಾಡಿ ಸದನದಿಂದ ಹೊರ ನಡೆಯುತ್ತಿದ್ದ ಗವರ್ನರ್ ಬಳಿಗೆ ತೆರಳಲು ಹಲವು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ. ಈ ವೇಳೆ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ರಾಜ್ಯಪಾಲರನ್ನು ಅಡ್ಡಗಟ್ಟಿದ್ದು, ಭಾಷಣ ಓದುವಂತೆ ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ನಾಯಕರನ್ನು ಮಾರ್ಷಲ್‌ಗಳು ತಡೆದಿದ್ದು, ರಾಜ್ಯಪಾಲರು ಹೊರಡಲು ಹೋಗಿ ಕೊಟ್ಟರು.
ಇದನ್ನೂ ಓದಿ: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣವನ್ನು ಓದಲು ನಕಾರ; ವಿಧಾನಸಭೆಯಲ್ಲಿ ಹೈಡ್ರಾಮಾ
ರಾಜ್ಯಪಾಲರ ನಡೆಗೆ ಸಿಎಂ ಕಿಡಿ
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸಿದ್ದು, ಈ ನಡೆ ಸಂವಿಧಾನ ಬಾಹಿರ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ರಾಜ್ಯಪಾಲ ಗೆಹ್ಲೋಟ್ ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ. ಹೀಗಾಗಿ ಪ್ರಸ್ತಾವನೆ ಮೊರೆ ಹೋಗುವ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ರಾಜ್ಯಪಾಲರು ತಾವೇ ತಯಾರು ಮಾಡಿದ ಭಾಷಣ ಮಾಡಿದ್ದಾರೆ. ಈ ಮೂಲಕ ಸಂವಿಧಾನದ ವಿಧಿಗಳನ್ನು ವಿರೋಧಿಸಿದ್ದಾರೆ. ರಾಜ್ಯಪಾಲರ ನಡೆ ಖಂಡಿಸಿ ನಮ್ಮ ಶಾಸಕರು ಪ್ರತಿಭಟನೆ ಮಾಡ್ತಾರೆ ಎಂದಿದ್ದರು.
ಸಂವಿಧಾನದ ಪ್ರಕಾರ ಭಾಷಣ ಮಾಡೋದು ರಾಜ್ಯಪಾಲರ ಕರ್ತವ್ಯ. ರಾಜ್ಯಪಾಲರು ಅವರು ರೆಡಿ ಮಾಡಿ ಭಾಷಣವನ್ನು ಓದಿದ್ದಾರೆ. ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಲೇಬೇಕು. ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುತ್ತಾರೆ ಎಂದು ರಾಜ್ಯಪಾಲರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಮನ್‌ರೇಗಾ ಮರುಸ್ಥಾಪನೆ ಮಾಡಿ, ವಿಬಿ ಜಿ ಜೀ ರದ್ದು ಮಾಡುವವರೆಗೂ ನಿರಂತರ ಹೋರಾಟ ಮಾಡೋದಾಗಿ ಅವರು ರಾಮ್.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.