ಚಿಕ್ಕಮಗಳೂರು, ಜನವರಿ 23: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ನಡೆಯುತ್ತಿದೆ ಆರೋಪ ಚಿಕ್ಕಮಗಳೂರು (ಚಿಕ್ಕಮಗಳೂರು) ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನ ಪ್ರಭಾವಿ ಮುಖಂಡರೊಬ್ಬರು ಅರಣ್ಯ ಇಲಾಖೆ ಅನುಮತಿ ಪಡೆಯದೇ ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಕೊಳಗಾವೆ ಗ್ರಾಮದ ಸರ್ವೆ ನಂಬರ್ 58 ರಲ್ಲಿ ಕಾಮಗಾರಿ ನಡೆಯುತ್ತಿದೆ, ಈ ಪ್ರದೇಶವನ್ನು 2011 ರಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಎಂದು ಘೋಷಿಸಲಾಗಿದೆ. ಇದು ಪರಿಸರ ಸೂಕ್ಷ್ಮ ಪ್ರದೇಶವೂ ಆಗಿರುವುದರಿಂದ ಇಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಕಠಿಣ ನಿರ್ಬಂಧಗಳಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಭದ್ರಾ ವೈಲ್ಡ್ ಲೈಫ್ ವಿಭಾಗ ಡಿಎಫ್‌ಒ ಪುಲ್ಕಿತ್, ಈ ಕಾಮಗಾರಿ ಬಫರ್ ವ್ಯಾಪ್ತಿಗೆ ಬರುತ್ತದೆ. ನಮ್ಮ ಸಿಬ್ಬಂದಿಯಿಂದ ವರದಿ ಕೇಳಿದ್ದೇನೆ. ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಿದ್ದಾರೆ. ವರದಿ ಬಂದ ಬಳಿಕ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಎನ್‌ಟಿಸಿಎ (ಎನ್‌ಟಿಸಿಎ) ಮಾರ್ಗಸೂಚಿಗಳ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಇನ್ನೊಂದೆಡೆ, ಚಿಕ್ಕಮಗಳೂರು ವೃತ್ತದ ಸಿಸಿಎಫ್ ಯಶ್ ಪಾಲ್ ಮಾತನಾಡಿ, ಅರಣ್ಯ ಇಲಾಖೆಯಿಂದ ಯಾವುದೇ ಎನ್ ಒಸಿ ನೀಡಿಲ್ಲ. ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಅವಕಾಶವಿಲ್ಲ. ನಮಗೆ ಈ ಬಗ್ಗೆ ಮಾಹಿತಿ ಬಂದಿದ್ದು, ಕಾನೂನು ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.