Headlines

Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!

Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!


ಕಲಬುರಗಿ, ಜನವರಿ 23: ತನ್ನ ಸಹೋದರಿಯರು ನಗರದಲ್ಲಿ ವಾಸಿಸುತ್ತಿದ್ದನು, ತಾನು ಮಾತ್ರ ಹಳ್ಳಿಯಲ್ಲಿ ವಾಸಿಸುತ್ತಿದ್ದೇನೆ ಎಂದು ಮನನೊಂದು ಎರಡು ತಿಂಗಳ ಹಿಂದೆಯೇ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ ಶರಣಾಗಿರುವ ವ್ಯಕ್ತಿಕಾರಿ ಘಟನೆ ಕಲಬುರಗಿ ನಗರದ ಆಜಾದಪುರ ಬಡಾವಣೆಯಲ್ಲಿ ನಡೆದಿದೆ. ಅನಸೂಯಾ ಮೃತ ಯುವತಿ, ಮನೆಯಲ್ಲಿಯೇ ನೇಣು ಬಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ಮನೆ ಮಗಳು ಹುಚ್ಚು ನಿರ್ಧಾರಕ್ಕೆ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ.

ಅತ್ತೆ ಮಗ ಅವಿನಾಶ್ ಜೊತೆ ಸಪ್ತಪದಿ ತುಳಿದಿದ್ದ ಅನಸೂಯಾ, ಆರಂಭದಲ್ಲಿ ಚೆನ್ನಾಗಿಯೇ ಇದ್ದಳು. ಈಕೆಗ ಮೂವರು ಸಹೋದರಿಯರಿಗೂ ಕೂಡ ವಿವಾಹವಾಗಿದ್ದರು, ಅವರೆಲ್ಲರೂ ಸಿಟಿಯಲ್ಲಿ ನೆಲೆಸಿದ್ದರು. ಇದೇ ವಿಚಾರಕ್ಕೆ ದಿನ ಕಳೆದಂತೆ ಅನಸೂಯಾಗೆ ಬೇಸರ ಮೂಡಿದೆ. ತಾನು ಮಾತ್ರ ಮದುವೆಯಾಗಿ ಹಳ್ಳಿಯಲ್ಲಿ ಇದ್ದೇನೆ ಎಂಬ ಗಿಲ್ಟಿ ಫೀಲ್ ಬಂದಿದೆ. ಹೀಗಾಗಿ ಮಾನಸಿಕವಾಗಿ ನೊಂದಿದ್ದ ಈಕೆ, ತವರಿಗೆ ಹೋದಾಗಲೂ ವಿಚಾರವನ್ನು ನೀವುಬಾರಿ ಕುಟುಂಬಸ್ಥರಿಗೆ ಹೇಳಿದ್ದಳು. ತಾನು ಉತ್ತಮ ವಿದ್ಯಾಭ್ಯಾಸ ಪಡೆದರೂ ಹಳ್ಳಿಯಲ್ಲಿ ಜೀವನ ನಡೆಸುತ್ತಿರುವ ಕೊರಗಿನ ಬಗ್ಗೆ ಅಲವತ್ತುಕೊಂಡಿದ್ದಳು. ಈ ವೇಳೆ ಆಕೆಗೆ ಕಡ್ಡಾಯ ಬುದ್ಧಿಮಾತು ಕೂಡ ಹೇಳಿದ್ದರು. ಆದರೂ ಇದೇ ವಿಚಾರವಾಗಿ ಕೊರಗುತ್ತಿದ್ದ ಆಕೆಯೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿಲ್ಲವೆಂದು ಪತ್ನಿ ಕಿರಿಕ್; ಕತ್ತು ಹಿಸುಕಿ ಕೊಲೆ ಮಾಡಿದ ಪತಿ

ಇನ್ನು ಮದುವೆಗೂ ಮುನ್ನ ಅನಸೂಯಾ ಕೂಡ ಬೆಂಗಳೂರಿನಲ್ಲಿ ಒಂದು ವರ್ಷ ಕೆಲಸ ಮಾಡಿದ್ದಳು. ಹೀಗಾಗಿ ಆಕೆಗೆ ಜೀವನ ಅಂದ್ರೆ ಅಷ್ಟಾಗಿ ಬರಲು ಹಳ್ಳಿ. ಇತ್ತ ಪ್ರೀತಿಸಿದ ಹುಡುಗ ಬಿಡೋಕು ಆಗ್ತಿರಲಿಲ್ಲ. ಮದುವೆ ಬಳಿಕ ಸಿಟಿ ವ್ಯಾಮೋಹ ಈಕೆಯನ್ನು ವಿಪರೀತ ಕಾಡತೊಡಗಿದೆ. ಈ ನಡುವೆಯೂ ಕಲಬುರಗಿಯ ಆಜಾದಪುರದಲ್ಲಿರುವ ಗಂಡನ ಮನೆಯಲ್ಲಿ ಜೀವನ ಕಳೆಯುತ್ತಿದ್ದ ಈಕೆ, ನಿನ್ನೆ ಮಧ್ಯಾಹ್ನ ಗಂಡನ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 3:32 pm, ಶುಕ್ರ, 23 ಜನವರಿ 26



Source link

Leave a Reply

Your email address will not be published. Required fields are marked *