ಬೆಂಗಳೂರು, (ಜನವರಿ 22): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (ಪ್ರಜ್ವಲ್ ರೇವಣ್ಣ) ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ನೀಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ದೌರ್ಜನ್ಯ ಹಾಗೂ ಅತ್ಯಾಚಾರ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಅಧಿಕಾರಿ ತನಿಖಾ ತಂಡದ 30, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿ ಸೇರಿದಂತೆ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ಒಟ್ಟು 35 ಲಕ್ಷ ರೂ. ಬಹುಮಾನವನ್ನು ಘೋಷಿಸಿದೆ.
ಯಾರ್ಯಾರಿಗೆ ಎಷ್ಟು ಹಣ?
ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್ಪಿ ಸುಮನ್ ಡಿ ಪನ್ನೇಕರ್, ಎಸ್ಪಿ, ಸಿಇ ಸೈಮನ್, ಎಸ್ಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ ಈ 25 ಲಕ್ಷ ರೂ. ನಗದು ಬಹುಮಾನ ನೀಡಲಾಗುತ್ತದೆ.
ಡಿಜಿ ಮತ್ತು ಐಜಿಪಿ ದರ್ಜೆ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25 ಲಕ್ಷ ರು, ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ(ರಾಜ್ಯ ವ್ಯಾಪ್ತಿ) ಅಧಿಕಾರಿಗಳು ತಲಾ 8 ಸಾವಿರದಂತೆ ಒಟ್ಟು 3 ಲಕ್ಷ ರೂ, ಇಲಾಖೆಯ ಇತರೆ ಅಧಿಕಾರಿ-ಸಿಬ್ಬಂದಿಗೆ ತಲಾ 5 ಸಾವಿರದಂತೆ ಒಟ್ಟು 2 ಲಕ್ಷ ರೂ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5 ಸಾವಿರದಂತೆ ಒಟ್ಟು 1 ನಗದನ್ನು ಒಳ ಆಡಳಿತ ಇಲಾಖೆ ಮಂಜೂರು ಮಾಡಿದೆ.
ಆದೇಶದಲ್ಲೇನಿದೆ?
ಹಾಸನ ಜಿಲ್ಲಾ ಮಾಜಿ ಸಂಸದ ಪುಜ್ವಲ್ ರೇವಣ್ಣ ಮತ್ತು ಹೆಚ್.ಡಿ.ರೇವಣ್ಣ ವಿರುದ್ಧ ದೂರು ದಾಖಲಿಸಿಕೊಂಡಿರುವ ಪುಕರಣಗಳ ತನಿಖೆ ಕುರಿತು ರಚಿಸಿರುವ ವಿಶೇಷ ತನಿಖಾ ತಂಡ ಸದರಿವರ ವಿರುದ್ಧ ಒಟ್ಟು 04 ಪಕರಣಗಳು ಮತ್ತು ಹೆಚ್.ಡಿ.ರೇವಣ್ಣ ರವರ ವಿರುದ್ಧ ದಾಖಲಾಗಿರುವ ಒಟ್ಟು 01 ಪುರಾವೆಗಳ ವಿರುದ್ಧ ತನಿಖಾ ಅವಧಿಯಲ್ಲಿ ಸಮರ್ಪಕವಾಗಿ ತನಿಖೆ ನಡೆಸಿ ಸಾಕ್ಷಾಧಾರಗಳನ್ನು ಸಲ್ಲಿಸಿ, ಒಟ್ಟು 05 ಪ್ರಕರಣಗಳಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗಿದೆ. ಸದರಿ ಪುಕರಣಗಳ ಮೇಲಿನ ಸಿ.ಐ.ಡಿ. ಸಾಯಿ ಕ್ರೈಂ ಪೊಲೀಸ್ ಠಾಣಾ ಮೊ.ಸಂ.02/2024 ರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆ ನಡೆಸಿದ ಆರೋಪಿ ಪ್ರಜ್ವಲ್ ರೇವಣ್ಯ ಸಾಭೀತಾಗಿದ್ದ ಅಪರಾಧ ಪ್ರಕರಣದ ಆರೋಪಿ ಪ್ರಜ್ವಲ್ ರೇವಣಸಿದ್ದಪ್ಪ ಮತ್ತು 11,60,000 ರೂ. ದಂಡವನ್ನು ವಿಧಿಸಿ ದಂಡದ ಮೊತ್ತದಲ್ಲಿ 11,25,000 ರೂ. ಹಣವನ್ನು ಸಂತ್ರಸ್ತತೆಗೆ ಪರಿಹಾರವಾಗಿ ಸೂಚಿಸಲಾಗಿದೆ.
ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಗ್ರ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸದ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಪಡೆಯಲ್ಲಿ ವೃತ್ತಿಪರತೆ, ಹೊಣೆಗಾರಿಕೆ ಮತ್ತು ಶ್ರೇಷ್ಠತೆಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ನಗದು ಪ್ರಶಸ್ತಿಗಳನ್ನು ನೀಡಲಾಗುತ್ತದೆ ಎಂದು ಗೃಹ ಇಲಾಖೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 5:56 pm, ಶುಕ್ರ, 23 ಜನವರಿ 26