ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ


ಬಳ್ಳಾರಿ, (ಜನವರಿ 22): ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ (ಬಳ್ಳಾರಿ ಬ್ಯಾನರ್ ಹಿಂಸಾಚಾರ) ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ. ಹೌದು…ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (ಜನಾರ್ದನ ರೆಡ್ಡಿ) ಹಾಗೂ ಶ್ರೀರಾಮುಲುಗೆ (ಶ್ರೀರಾಮುಲು) ಸೇರಿದ ಜಿ ಸ್ಕೈರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ನಲ್ಲಿ (ಮಾದರಿ ಮನೆ) ಬೆಂಕಿ ಅವಘಡ ಸಂಭವಿಸಿದ್ದು, ಕಾಂಗ್ರೆಸ್ ನವರೇ ಬೆಂಕಿ ಹಚ್ಚಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಬೆಂಕಿ ಪ್ರಕರಣ ಮತ್ತೆ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಗಳಿವೆ.

ಈ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇನೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎಂಬಂತೆ ಈಗ ಬೆಂಕಿ ಹಚ್ಚಿದ್ದಾರೆ. ನಮಗೆ ಸೇರಿದ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಿದ್ದಾರೆ. ನೂರು ಮೌಲ್ಯದ ಲೇಔಟ್ ಮಾಡಲಾಗಿದೆ. ಖರೀದಿದಾರರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಿಸಿದ್ದೆವು. ಇಂದು (ಜನವರಿ 23) ಸಂಜೆ ಆರೂವರೆ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿ ಹಚ್ಚಿದವರನ್ನ ಹಿಡಿಯಲು ಯತ್ನಿಸಿದ್ದಾರೆ ಎಂದು ಸ್ಫೋಟಕ ಮಾಡಿದ್ದಾರೆ.



Source link

Leave a Reply

Your email address will not be published. Required fields are marked *