Headlines

ಪೊಲೀಸ್ ಠಾಣೆಗೆ ದೂರು ನೀಡಿ ವಾಪಾಸ್ಸಾಗುತ್ತಿದ್ದ ಪುನೀತ್ ಕೆರೆಹಳ್ಳಿ ಅರೆಸ್ಟ್!

ಪೊಲೀಸ್ ಠಾಣೆಗೆ ದೂರು ನೀಡಿ ವಾಪಾಸ್ಸಾಗುತ್ತಿದ್ದ ಪುನೀತ್ ಕೆರೆಹಳ್ಳಿ ಅರೆಸ್ಟ್!

ಪೊಲೀಸ್ ಠಾಣೆಗೆ ದೂರು ನೀಡಿ ವಾಪಾಸ್ಸಾಗುತ್ತಿದ್ದ ಪುನೀತ್ ಕೆರೆಹಳ್ಳಿ ಅರೆಸ್ಟ್!

ಬೆಂಗಳೂರು: ಹಿಂದುಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ಅವರನ್ನು ಜಾಮೀನಿನ ಮೇಲೆ ರಿಲೀಸ್ ಮಾಡಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಹಳೇ ಪ್ರಕರಣದ ಸಂಬಂಧ ಹಿಂದು ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದು, ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಕೆಂಪಾಪುರದಲ್ಲಿ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಆರೋಪಿಸಿ ಗುರುವಾರ ಪುನೀತ್‌ ಸೋಲದೇವನಹಳ್ಳಿ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದರು. ದೂರು ನೀಡಿ ತೆರಳುವ ವೇಳೆ ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

2025ರಲ್ಲಿ ಅಲ್ಲಾಬಕ್ಷ್‌ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದ ಸಂಬಂಧ ಹಲವು ಬಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ.

ಪೊಲೀಸರು ಶುಕ್ರವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಪುನೀತ್ ಕೆರೆಹಳ್ಳಿ, ಗುರುವಾರ ಬಂಧನಕ್ಕೊಳಗಾಗಿ, ಶುಕ್ರವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಜನವರಿ 16 ರಂದು ಬಿಂಗಿಪುರದ ಕಾಲೋನಿಯ ಮೇಲೆ ದಾಳಿ ನಡೆಸಿ ಅಲ್ಲಿನ ನಿವಾಸಿಗಳನ್ನು ಅಕ್ರಮ ವಲಸಿಗರು ಎಂದು ಆರೋಪಿಸಿದಕ್ಕೆ ಬನ್ನೇರುಘಟ್ಟ ಪೊಲೀಸರು ಪುನೀತ್‌ ಅವರನ್ನು ಬಂಧಿಸಿದ್ದರು.

Source link

Leave a Reply

Your email address will not be published. Required fields are marked *