ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಸ್ಫೋಟಕ ತಿರುವು: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಅಪ್ರಾಪ್ತರು?

ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಸ್ಫೋಟಕ ತಿರುವು: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಅಪ್ರಾಪ್ತರು?


ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಬೆಂಕಿ

ಬಳ್ಳಾರಿ, ಜನವರಿ 24: ಬಳ್ಳಾರಿಯಲ್ಲಿ (ಬಳ್ಳಾರಿ) ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (ಜನಾರ್ದನ ರೆಡ್ಡಿ) ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಪ್ರಾರು ಸೇರಿ ಒಟ್ಟು 8 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಳ್ಳಾರಿಯ ಕೌಲ್ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ಬಂಧಿಸಲಾಗಿದೆ, ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುತ್ತಿರುವ ವೇಳೆ ಅಜಾಗರೂಕತೆಯಿಂದ ಅಥವಾ ದುರುದ್ದೇಶದಿಂದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ರುಕ್ಮಿಣಿ ಅವೆನ್ಯೂ ಲೇಔಟ್‌ನಲ್ಲಿರುವ ಸೈಟ್ ಇಂಜಿನಿಯರ್ ರಿಜ್ವಾನ್ ಅವರು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರದಲ್ಲಿ ನಮೂದಿಸಿದ ಪ್ರಕಾರ, ಶುಕ್ರವಾರ ಸಂಜೆ 5.30ರ ವೇಳೆಗೆ 20 ರಿಂದ 25 ವರ್ಷ ವಯಸ್ಸಿನ 8 ರಿಂದ 10 ಮಂದಿ ಕಿಡಿಗೇಡಿಗಳು ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ್ದಾರೆ.

ಈ ಮಾಡೆಲ್ ಹೌಸ್ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮೀ ಅವರಿಗೆ ಸೇರಿದ್ದಾರೆ. ಬೆಂಕಿಯಿಂದ ಟಿವಿ, ಕುರ್ಚಿಗಳು, ಸೋಫಾ ಸೆಟ್‌ಗಳು, ಕಿಚನ್, ಎಸ್‌ಸಿ, ಫ್ರಿಡ್ಜ್, ವುಡನ್ ಬಾಗಿಲುಗಳು ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಂದಾಜು 1.25 ಕೋಟಿ ರೂ. ಮೌಲ್ಯದ ವಸ್ತುಗಳು ಹಾನಿಯಾಗಿವೆ ಎಂದು ದೂರದಲ್ಲಿ ಉಲ್ಲೇಖಿಸಲಾಗಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಜಕೀಯ ಆಯಾಮದಲ್ಲೂ ತನಿಖೆ?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಬಳ್ಳಾರಿಯನ್ನು ಭಸ್ಮ ನಡೆಯಲಿದೆ’ ಎಂಬ ಶಾಸಕ ಭರತ್ ರೆಡ್ಡಿ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸಬೇಕು ಎಂದು ರಿಜ್ವಾನ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ನಿರ್ದಿಷ್ಟ ರಾಜಕೀಯ ಪ್ರೇರಿತ ಕೃತ್ಯವೇ ಎಂಬ ಅಂಶವನ್ನು ಪರಿಶೀಲಿಸಲಾಗುತ್ತಿದೆ.

ಪ್ರಕರಣದ ಹಿನ್ನೆಲೆ

ಈ ಮಾಡೆಲ್ ಹೌಸ್ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಪತ್ನಿಗೆ ಸೇರಿದ್ದು. ಜಿ ಸ್ಕ್ವೇರ್ ಲೇಟ್‌ನಲ್ಲಿರುವ ಈ ಆಸ್ತಿ ಒಟ್ಟು 109 ಮಿತಿ ಲೇಔಟ್‌ನ ಭಾಗವಾಗಿದೆ. ಈ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿರುವುದರ ಹಿಂದೆ ಕಾಂಗ್ರೆಸ್ ಬೆಂಬಲಿಗರ ಕೈವಾಡವಿದೆ ಎಂಬ ಗಂಭೀರ ಆರೋಪಗಳು ಶುಕ್ರವಾರ ಕೇಳಿಬಂದಿದ್ದವು.

ಇದನ್ನೂ ಓದಿ: ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್ ಗೆ ಬೆಂಕಿ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಹಿಂದಿನ ಬ್ಯಾನರ್ ಗಲಾಟೆ ಸಂದರ್ಭದಲ್ಲೇ ಬೆಂಕಿ ಹಚ್ಚುವ ಬೆದರಿಕೆ ಹಾಕಲಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈಗ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣವು ಮುಂದಿನ ದಿನಗಳಲ್ಲಿ ರಾಜಕೀಯ ವಲಯದಲ್ಲಿ ಮತ್ತಷ್ಟು ಅಲ್ಲೋಲಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ. ಸದ್ಯ ವಶಕ್ಕೆ ಪಡೆದವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *