ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ; ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಹೇಳಿದ್ದೇನು?

ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ; ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಹೇಳಿದ್ದೇನು?


ಗಣರಾಜ್ಯೋತ್ಸವ ಪೆರೇಡ್‌ಗೆ ಭಾರೀ ಭದ್ರತೆ

ಬೆಂಗಳೂರು, ಜನವರಿ 24: ಸೋಮವಾರ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ಗೆ (ಗಣರಾಜ್ಯೋತ್ಸವದ ಮೆರವಣಿಗೆ) ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸಿಮಂತ್ ಕುಮಾರ್ ಸಿಂಗ್ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಬಾರಿ ಪೆರೇಡ್‌ನಲ್ಲಿ ಒಟ್ಟು 516 ಜನ ಭಾಗವಹಿಸಿದ್ದರು, ಜೊತೆಗೆ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮ ಬೆಳಿಗ್ಗೆ 8.58ಕ್ಕೆ ಪ್ರಾರಂಭವಾಗಲಿದೆ, ಸಾರ್ವಜನಿಕರು ಕಾರ್ಯಕ್ರಮ ಪ್ರಾರಂಭವಾಗುವ ಮುನ್ನವೇ ಸ್ಥಳಕ್ಕೆ ಆಗಮಿಸುವ ಕಾಮಿಷನರ್ ಮನವಿ ಮಾಡಿದರು.

ಬೆಳಗ್ಗೆ 8 ಗಂಟೆಗೆ ಹಾಜರಿರುವಂತೆ ಸಾರ್ವಜನಿಕರಿಗೆ ಸೂಚನೆ

ಭದ್ರತಾ ಪರಿಶೀಲನೆಗಾಗಿ ಬೆಳಿಗ್ಗೆ 8 ಗಂಟೆಗೆ ಎಲ್ಲಾ ಸಾರ್ವಜನಿಕರಿಗೆ ತಲುಪಬೇಕು. 8 ಗಂಟೆ ನಂತರ ಆಗಮಿಸಿದವರಿಗೆ ಪರಿಶೀಲನೆ ನಡೆಸಲು ಕಷ್ಟವಾಗುವ ಸಾಧ್ಯತೆಯಿದೆ ಬೇಗ ಬರುವಂತೆ ಸೂಚಿಸಲಾಗಿದೆ. ಈ ಬಾರಿ ತಮಿಳುನಾಡು ಪೊಲೀಸ್ ಪಡೆ, ಅಸ್ಸಾಂ ರೈಫಲ್ಸ್ (ಎಎಸ್ಎಫ್), ಭಾರತೀಯ ಸೇನೆ ಹಾಗೂ ಸಿಆರ್‌ಪಿಎಫ್ ಸಿಬ್ಬಂದಿ ಪೆರೆಡ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ

ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಸಂಚಾರ ನಿರ್ಬಂಧಗಳ ಕುರಿತು ಮಾಹಿತಿ ನೀಡಿದ ಸಿಮಂತ್ ಕುಮಾರ್, ಜನವರಿ 26 ರಂದು ಬೆಳಿಗ್ಗೆ 8.30 ರಿಂದ 10.30 ರವರೆಗೆ ಕಬ್ಬನ್ ರಸ್ತೆಯಲ್ಲಿ ಬಿಆರ್ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕಿನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಹೇಳಿದರು. ಸೆಂಟ್ರಲ್ ಸ್ಟ್ರೀಟ್ ಅನಿಲ್ ಕುಂಬ್ಳೆ ಸರ್ಕಲ್‌ನಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ ಹಾಗೂ ಕಬ್ಬನ್ ರಸ್ತೆ–ಸಿಟಿಒ ಸರ್ಕಲ್‌ನಿಂದ ಕೆಆರ್ ರಸ್ತೆ ಜಂಕ್ಷನ್‌ವರೆಗೆ ಸಂಚಾರ ನಿರ್ಬಂಧವಿರಲಿದೆ. ಜೊತೆಗೆ ಎಂಜಿ ರಸ್ತೆ, ಅನಿಲ್ ಕುಂಬ್ಳೆ ಸರ್ಕಲ್‌ನಿಂದ ಕ್ವೀನ್ಸ್ ಸರ್ಕಲ್‌ವರೆಗೆ ಎಲ್ಲಿಯೂ ಪಾರ್ಕಿಂಗ್ ಮಾಡದಂತೆ, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *