ಏರಿಕೆ ಕಂಡ ‘ಬಾರ್ಡರ್ 2’ ಸಿನಿಮಾ ಕಲೆಕ್ಷನ್; 2 ದಿನಕ್ಕೆ ಎಷ್ಟು ಕೋಟಿ?

ಏರಿಕೆ ಕಂಡ ‘ಬಾರ್ಡರ್ 2’ ಸಿನಿಮಾ ಕಲೆಕ್ಷನ್; 2 ದಿನಕ್ಕೆ ಎಷ್ಟು ಕೋಟಿ?


ಸಿನಿಪ್ರಿಯರು ದೇಶಭಕ್ತಿ ಸಿನಿಮಾಗಳನ್ನು ಖಂಡಿತಾ ಇಷ್ಟಪಡುತ್ತಾರೆ. ಕಳೆದ ವರ್ಷ ಅದಕ್ಕೆ ಬ್ಲಾಕ್ ಬಸ್ಟರ್ ಆದ ‘ಧುರಂಧರ’ ಚಿತ್ರವೇ ಸಾಕ್ಷಿ. ಈಗ ‘ಬಾರ್ಡರ್ 2’ (ಗಡಿ 2) ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಮೊದಲ ದಿನ ಮಿಶ್ರಿತ ಪ್ರತಿಕ್ರಿಯೆಗಳು ಈ ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿತು. ಎರಡನೇ ದಿನ ಕೂಡ ಒಳ್ಳೆಯ ಕಲೆಕ್ಷನ್ (ಬಾಕ್ಸ್ ಆಫೀಸ್ ಕಲೆಕ್ಷನ್) ಆಗಿದೆ. ಮೂರೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಆಗುವ ಸೂಚನೆ ಸಿಕ್ಕಿದೆ.

ಮೊದಲ ದಿನವಾದ ಜನವರಿ 23ರಂದು ‘ಬಾರ್ಡರ್ 2’ ಸಿನಿಮಾ 30 ಕೋಟಿ ರೂಪಾಯಿ ಗಳಿಸಿತು. 2ನೇ ದಿನ ಅಂದಾಜು 35 ಕೋಟಿ ರೂಪಾಯಿ ಗಳಿಸಿದೆ ಎಂದು sacnilk ವರದಿ ಮಾಡಿದೆ. ಗಳಿಕೆಯಲ್ಲಿ ಕೊಂಚ ಏರಿಕೆ ಕಂಡಿರುವುದು ಚಿತ್ರತಂಡದ ಖುಷಿಗೆ ಕಾರಣವಾಗಿದೆ. ಭಾನುವಾರ (ಜನವರಿ 25) ಕೂಡ ಇದೆ ಪ್ರಮಾಣದಲ್ಲಿ ಕಲೆಕ್ಷನ್ ಆದರೆ 3 ದಿನದಲ್ಲಿ ಈ ಸಿನಿಮಾ ಸೆಂಚುರಿ ಬಾರಿಸಲಿದೆ.

1997ರಲ್ಲಿ ‘ಬಾರ್ಡರ್’ ಚಿತ್ರ ರಿಲೀಸ್ ಆಗುತ್ತಿದೆ. ಆ ಸಿನಿಮಾದ ಸೀಕ್ವೆಲ್ ಆಗಿ ಈಗ ‘ಬಾರ್ಡರ್ 2’ ತೆರೆಕಂಡಿದೆ. ಅನುರಾಗ್ ಸಿಂಗ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಸನ್ನಿ ಡಿಯೋಲ್, ವರುಣ್ ಧವನ್, ದಿಲ್ಜಿತ್ ದೊಸಾಂಜ್, ಅಹಾನ್ ಶೆಟ್ಟಿ, ಸೋನಂ ಭಾಜ್ವ, ಮೋನಾ ಸಿಂಗ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

1971ರಲ್ಲಿ ನಡೆದ ಭಾರತ-ಪಾಕಿಸ್ತಾನ ನಡುವಿನ ಯುದ್ಧವನ್ನು ಆಧರಿಸಿ ‘ಬಾರ್ಡರ್ 2’ ಸಿನಿಮಾ ಮಾಡಲಾಯಿತು. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಈ ಸಿನಿಮಾ ರಿಲೀಸ್ ಆಗಿರುವುದು ಪ್ಲಸ್ ಪಾಯಿಂಟ್. ಈ ಬಾರಿ ವೀಕೆಂಡ್ ಜೊತೆಗೆ ಗಣರಾಜ್ಯೋತ್ಸವ ಬಂದಿದೆ. ಅಂದರೆ, ಶನಿವಾರ, ಭಾನುವಾರ ಹಾಗೂ ಸೋಮವಾರ ಸತತ ರಜೆ ಸಿಕ್ಕಿದೆ. ಇದರಿಂದ ಚಿತ್ರತಂಡಕ್ಕೆ ಅನುಕೂಲವಾಗುತ್ತದೆ.

ಇದನ್ನೂ ಓದಿ: ಬಾರ್ಡರ್ 2 ಟ್ವಿಟರ್ ವಿಮರ್ಶೆ: ಮಿಶ್ರ ಪ್ರತಿಕ್ರಿಯೆ ಪಡೆದ ‘ಬಾರ್ಡರ್ 2’ ಸಿನಿಮಾ

ಈ ಟ್ರೇಲರ್ ಮತ್ತು ಹಾಡು ಬಿಡುಗಡೆಯಾದಾಗ ವರುಣ್ ಧವನ್ ಅವರನ್ನು ಟ್ರೋಲ್ ಮಾಡಲಾಗಿತ್ತು. ಆದರೆ ವರುಣ್ ಧವನ್ ಅವರ ವೃತ್ತಿ ಜೀವನದಲ್ಲಿ ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಬಾರ್ಡರ್ 2’ ಪಾತ್ರವಾಗಿದೆ. ಈ ಸಿನಿಮಾದ ಟೋಟಲ್ ಕಲೆಕ್ಷನ್ ಎಷ್ಟಾಗಲಿದೆ ಎಂದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *