Mann Ki Baat: ಭಾರತೀಯ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ ಪ್ರತೀಕವಾಗಬೇಕು: ಪ್ರಧಾನಿ ಮೋದಿ

Mann Ki Baat: ಭಾರತೀಯ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ ಪ್ರತೀಕವಾಗಬೇಕು: ಪ್ರಧಾನಿ ಮೋದಿ


ದೆಹಲಿ, ಜನವರಿ 25: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 2026ರ ಮೊದಲ ಮನ್ ಕಿ ಬಾತ್ ಸಂಚಿಕೆಯನ್ನು ಉದ್ದೇಶಿಸಿ. ದೇಶದ ಜನತೆಗೆ ಗಣರಾಜ್ಯೋತ್ಸವ ಮತ್ತು ರಾಷ್ಟ್ರೀಯ ಮತದಾರರ ದಿನಾಚರಣೆಯ ಶುಭಾಶಯಗಳು. ಮತದಾನ ಮಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮನ್ ಕಿ ಬಾತ್ ಕಾರ್ಯಕ್ರಮದ 130ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿ ಮತದಾನಕ್ಕೆ ಅರ್ಹರಾಗುವ ಯುವಜನರನ್ನು ಪ್ರೋತ್ಸಾಹಿಸಬೇಕೆಂದು ಒತ್ತಿ ಹೇಳಿದರು. ಪ್ರಜಾಪ್ರಭುತ್ವದಲ್ಲಿ ಭಾಗವಹಿಸುವವರಿಗೆ ಪ್ರೋತ್ಸಾಹ ನೀಡುವ, ಯುವ ನಾಗರಿಕರು ಮತದಾರರಾಗುವ ಕ್ಷಣಗಳನ್ನು ಸಮುದಾಯಗಳಲ್ಲಿ ಸಂಭ್ರಮಿಸುವಂತೆ ಸಲಹೆ ನೀಡಿ.

ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುವಂತೆ, ಯುವಕ ಅಥವಾ ಯುವತಿ ಮೊದಲ ಬಾರಿ ಮತದಾರರಾಗುವ ಸಂದರ್ಭದಲ್ಲೂ ಸಂಪೂರ್ಣ ನೆರೆಹೊರೆಯವರು, ಗ್ರಾಮ ಅಥವಾ ನಗರ ಒಂದಾಗಿ ಅವರನ್ನು ಅಭಿನಂದಿಸಿ ಸಿಹಿ ಹಂಚಬೇಕು. ಈ ಮತದಾನದ ಜಾಗೃತಿ ಹೆಚ್ಚುವುದರ ಜೊತೆಗೆ, ಮತದಾರರ ಬಗ್ಗೆ ಹೆಚ್ಚು ಬಲವಾಗುವುದು ಎಂದು ಹೇಳಿದರು.

ಭಾರತದ ಆರ್ಥಿಕತೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜೈವಿಕ ತಂತ್ರಜ್ಞಾನದಲ್ಲಿ ಸಾಕಷ್ಟು ಸ್ಟಾರ್ಟ್ ಅಪ್ಗಳು ಪ್ರಾರಂಭವಾಗಿವೆ. ಭಾರತವು ವಿಶ್ವದಲ್ಲೇ ಅತಿದೊಡ್ಡ ಸ್ಟಾರ್ಟ್ ಅಪ್ ಹಬ್ ಆಗುತ್ತಿದೆ. ಹತ್ತು ವರ್ಷಗಳ ಹಿಂದೆಯೂ ಸಾಧ್ಯವಾಗಿಲ್ಲ ಹಲವು ಕ್ಷೇತ್ರಗಳಲ್ಲಿ ಇಂದು ಸ್ಟಾರ್ಟ್‌ಆಪ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶ, ಅಣುಶಕ್ತಿ, ಸೆಮಿಕಂಡಕ್ಟರ್‌ಗಳು, ಮೊಬೈಲಿಟಿ, ಹಸಿರು ಹೈಡ್ರೋಜನ್ ಮತ್ತು ಜೈವಿಕ ತಂತ್ರಜ್ಞಾನ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.

ಸ್ವಂತ ಸ್ಟಾರ್ಟ್ಅಪ್ ಆರಂಭಿಸಲು ಮುಂದಾಗುವ ಯುವಜನತೆಗೆ ಅಭಿನಂದಿಸಿದ ಪ್ರಧಾನಿ ಮೋದಿ, ನಾವು ತಯಾರಿಸುವ ಪ್ರತಿಯೊಂದು ಉತ್ಪನ್ನದ ಗುಣಮಟ್ಟವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಸಂಕಲ್ಪ ಮಾಡುವಂತೆ ಕರೆ ಮಾಡಿ. ಅದು ವಸ್ತ್ರೋದ್ಯಮವಾಗಲಿ, ತಂತ್ರಜ್ಞಾನವಾಗಲಿ, ಉತ್ಪನ್ನಗಳು ಅಥವಾ ಪ್ಯಾಕೇಜಿಂಗ್ ಆಗಲಿ, ಭಾರತೀಯ ಉತ್ಪನ್ನ ಎಂದರೆ ‘ಅತ್ಯುತ್ತಮ ಗುಣಮಟ್ಟ’ ಎಂಬ ಅರ್ಥ ಮೂಡಿಬರಬೇಕು. ಶ್ರೇಷ್ಠತೆಯನ್ನೇ ಪ್ರಧಾನಿ ನಮ್ಮದಾಗಿಸೋಣ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *