ಬೆಳಗಾವಿ, ಜನವರಿ 25: ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ (ದರೋಡೆ) ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣದ ಬಗ್ಗೆ ಬೆಳಗಾವಿ ಎಸ್ಪಿ ಕೆ.ರಾಮರಾಜನ್ ಮಾತನಾಡಿದ್ದು, ಮಹಾರಾಷ್ಟ್ರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ನಾವು ಸಹಕಾರ ನೀಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಸಂಬಂಧಿಸಿದೆ. ಇಲ್ಲಿ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ.
ಬೆಳಗಾವಿ ಎಸ್ಪಿ ಕೆ.ರಾಮರಾಜನ್ ಹೇಳಿದ್ದಿಷ್ಟು
ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಎಸ್ ಪಿ ಕೆ.ರಾಮರಾಜನ್, ಜನವರಿ 6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬರುತ್ತೆ. ಚೋರ್ಲಾ ಘಾಟ್‌ನಲ್ಲಿ ರಾಬರಿಯಾಗಿದೆ. ಹಳೆಯ 400 ಕೋಟಿ ರೂ ಆಗಿರಬಹುದು ಅಂತಾ ಮಾಹಿತಿ ಇದೆ.
ವಿಶಾಲ್ ನಾಯ್ಡು ಎಂಬಾತ ನಾಸಿಕ್‌ನಲ್ಲಿ ಅಕ್ಟೋಬರ್ 22 ರಂದು ಸಂದೀಪ್ ಪಾಟೀಲ್ ಎಂಬಾತನ ಕಿಡ್ನ್ಯಾಪ್ ಮಾಡಿದ್ದಾರೆ. ಅಕ್ಟೋಬರ್ 16 ರಂದು 400 ಕೋಟಿ ರೂ ಅಪಹರಣವಾಗಿದೆ. ಆ ಹಣ ಎಲ್ಲಿಗೆ ಹೋಗಿದೆ ಅಂತಾ ಪ್ರಶ್ನೆ ಮಾಡುತ್ತಾರೆ. ಈ ರಾಬರಿ ಆಗಿದ್ದು ಚೋರ್ಲಾ ಘಾಟ್ ನಲ್ಲಿ ಅಂತಾ ಪತ್ರದಲ್ಲಿ ಉಲ್ಲೇಖವಿದೆ. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್-ಇನ್ಸ್‌ಪೆಕ್ಟರ್ ಸೇರಿ ಒಂದು ತಂಡವನ್ನು ಕಳುಹಿಸಿದ್ದೇವೆ.
ಇದನ್ನೂ ಓದಿ: ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್ ಹೈಜಾಕ್?
ಎಸ್ಐಟಿ ತಂಡ ಕೂಡ ರಚನೆಯಾಗಿದೆ. ಸಂದೀಪ್ ಪಾಟೀಲ್ ಬಳಿ ನಮ್ಮವರು ಮಾತಾಡಿದ್ದಾರೆ. ಆತ ಹೇಳಿರುವ ಪ್ರಕಾರ ಕಿಡ್ನ್ಯಾಪ್ ಮಾಡಿದವರು ಆತನಿಗೆ ದರೋಡೆಯ ಬಗ್ಗೆ ಹೇಳಿದ್ದಾರೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ. ಚೋರ್ಲಾ ಘಾಟ್‌ನಲ್ಲಿ ಹೊಸದಾಗಿ ಸಿಸಿಟಿವಿ ಅಳವಡಿಕೆ ನಡೆಯಲಿದೆ ಎಂದು ಎಸ್‌ಪಿ ಕೆ.ರಾಮರಾಜನ್ ಹೇಳಿದ್ದಾರೆ.
ದರೋಡೆಕೋರರು ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡಿದ್ದೇಕೆ?
ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮಧ್ಯೆ ಇರುವ ಚೋರ್ಲಾ ಘಾಟ್ ಪ್ರದೇಶದಲ್ಲಿ ನೆಟ್ವರ್ಕ್ ಬರುವುದಿಲ್ಲ. ಗೋವಾದ ಕೇರಿಯಿಂದ ಬೆಳಗಾವಿಯ ಜಾಂಬೋಟಿವರೆಗೂ 4 ಗಂಟೆ ಸಂಪರ್ಕ ಕಡಿತಗೊಳ್ಳುತ್ತೆ. ಗೋವಾದಿಂದ ಚೋರ್ಲಾ ಘಾಟ್‌ಗೆ ಬರಲು 3 ಗಂಟೆ ಸಮಯ ಬೇಕು. ಚೋರ್ಲಾದಿಂದ ಮಹಾರಾಷ್ಟ್ರಕ್ಕೆ ಅರಣ್ಯದ ಅಂಚಿನ ದಾರಿ ಕನೆಕ್ಟ್ ಆಗುತ್ತೆ. ಚೋರ್ಲಾದಲ್ಲಿ ಸಣ್ಣಪುಟ್ಟ ವಾಹನ ಹೋಗುವಷ್ಟು ಕಾಲುದಾರಿ ಇದೆ. ಕಂಟೇನರ್‌ನಿಂದ ಮಿನಿ ಗೂಡ್ಸ್‌ಗೆ ಡಂಪ್ ಮಾಡಿ ನಂತರ ಹಣ ಸಾಗಿಸಿದ್ರಾ, ಈ ಪ್ರದೇಶದ ದರೋಡೆ ಮಾಡಿದರೆ ಯಾರಿಗೂ ಸಂಪರ್ಕ ಸಿಗೋದಿಲ್ಲ, ಹೀಗಾಗಿ ಈ ಎಲ್ಲಾ ವಿಚಾರಗಳಿಂದ ದರೋಡೆಕೋರರು ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
6 ಆರೋಪಿಗಳು ಅಂದರ್
400 ಕೋಟಿ ರೂ.ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಐವರನ್ನ ಬಂಧಿಸಿದ್ದ ಮಹಾರಾಷ್ಟ್ರ ಎಸ್‌ಐಟಿ ಅಧಿಕಾರಿಗಳು, ಇಂದು ಮತ್ತೊಬ್ಬನನ್ನ ಬಂಧಿಸಿದ್ದಾರೆ. ಜನವರಿ 23 ರಂದು ನಾಲ್ವರನ್ನ ಬಂಧಿಸಲಾಯಿತು. ಮಚೀಂದ್ರ ಮಾದವಿಯನ್ನ ವಿಚಾರಣೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 1:48 pm, ಭಾನುವಾರ, 25 ಜನವರಿ 26