‘ಕೆಜಿಎಫ್’ (ಕೆಜಿಎಫ್) ಸಿನಿಮಾ ಸರಣಿಯಿಂದಾಗಿ ಪ್ಯಾನ್ ಇಂಡಿಯಾ ಸ್ಟಾರ್ ನಿರ್ದೇಶಕ ಎನಿಸಿಕೊಂಡಿರುವ ಪ್ರಶಾಂತ್ ನೀಲ್, ‘ಸಲಾರ್’ ಸಿನಿಮಾದ ಮೂಲಕ, ‘ಕೆಜಿಎಫ್’ ಗೆಲುವು ಅದೃಷ್ಟವಲ್ಲ ಎಂದು ಸಾಭೀತುಪಡಿಸಿದ್ದಾರೆ. ಇದೀಗ ಪ್ರಶಾಂತ್ ನೀಲ್, ಜೂ ಎನ್ ಟಿಆರ್ ನಟನೆಯ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಡ್ರ್ಯಾಗನ್’ ಎಂದು ಹೆಸರಿಸಲಾಗಿದೆ. ಸಿನಿಮಾದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದರು, ಕೆಲವು ಕನ್ನಡದ ನಟರೂ ಸಹ ಸಿನಿಮಾನಲ್ಲಿದ್ದಾರೆ. ಇದೀಗ ಪ್ರಶಾಂತ್ ನೀಲ್ ಅವರು ‘ಡ್ರ್ಯಾಗನ್’ ಸಿನಿಮಾಕ್ಕಾಗಿ ಬಾಲಿವುಡ್ ನಟರನ್ನು ಕರೆದಿದ್ದಾರೆ.
ಜೂ ಎನ್ ಟಿಆರ್ ಸಿನಿಮಾದಲ್ಲಿ ಬಾಲಿವುಡ್ ಹಿರಿಯ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ಅನಿಲ್ ಕಪೂರ್ ನಟಿಸುತ್ತಿದ್ದಾರೆ. ಅನಿಲ್ ಕಪೂರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಡ್ರ್ಯಾಗನ್’ ಸಿನಿಮಾದ ಐಎಂಡಿಬಿ ಪೋಸ್ಟರ್ ಹಂಚಿಕೊಂಡಿದ್ದಾರೆ. ಅನಿಲ್ ಕಪೂರ್ ಅವರು ಈ ಹಿಂದೆ ಸಂದೀಪ್ ರೆಡ್ಡಿ ವಂಗಾ ನಟನೆಯ ‘ಅನಿಮಲ್’ ಸಿನಿಮಾದಲ್ಲಿ ನಟಿಸಿದ್ದು ಅದು ತುಂಬಾ ಯಶಸ್ವಿಯಾಯಿತು, ಆ ಸಿನಿಮಾವನ್ನು ದಕ್ಷಿಣದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದರು. ಈಗ ಮತ್ತೊಮ್ಮೆ ದಕ್ಷಿಣದ ನಿರ್ದೇಶಕನ ಸಿನಿಮಾದಲ್ಲಿ ಅನಿಲ್ ಕಪೂರ್ ನಟಿಸುತ್ತಿರುವಾಗ, ನೀಲ್ ಅವರು ಅನಿಲ್ ಅವರ ಪವರ್ ಫುಲ್ ಪಾತ್ರವನ್ನೇ ರೆಡಿ ಮಾಡುತ್ತಿದ್ದಾರೆ.
ಇನ್ನು ‘ಡ್ರ್ಯಾಗನ್’ ಸಿನಿಮಾದ ಮೂಲಕ ನೀಲ್ ಮೊದಲ ಬಾರಿಗೆ ಭಾರತದ ಗಡಿ ದಾಟುತ್ತಿದ್ದಾರೆ. ನೀಲ್, ಈವರೆಗೆ ಕೇವಲ ಭಾರತದಲ್ಲಿ ಮಾತ್ರವೇ ಸಿನಿಮಾ ಶೂಟಿಂಗ್ ಮಾಡಲಾಗಿತ್ತು. ಆದರೆ ‘ಡ್ರ್ಯಾಗನ್’ ಸಿನಿಮಾಕ್ಕಾಗಿ ವಿದೇಶಕ್ಕೆ ಕಾಲಿರಿಸಿದ್ದಾರೆ. ಆಫ್ರಿಕಾದಲ್ಲಿ ‘ಡ್ರ್ಯಾಗನ್’ ಸಿನಿಮಾದ ಆಕ್ಷನ್ ದೃಶ್ಯಗಳ ಶೂಟಿಂಗ್ ನಡೆಯಲಿದೆ.
ಇದನ್ನೂ ಓದಿ:’ವಾರ್ 2′ ಸೋತರೂ ಜೂ ಎನ್ ಟಿಆರ್ಗೆ ಮತ್ತೊಂದು ಅವಕಾಶ ಕೊಟ್ಟ ವೈಆರ್ಎಫ್
‘ಡ್ರ್ಯಾಗನ್’ ಸಿನಿಮಾದಲ್ಲಿ ರುಕ್ಮಿಣಿ ವಸಂತ್ ನಾಯಕಿ. ಅಲ್ಲಿ ಶೂಟಿಂಗ್ ನಲ್ಲಿ ರುಕ್ಮಿಣಿ ಭಾಗವಹಿಸಿದ್ದಾರೆ. ಮಲಯಾಳಂನ ಸ್ಟಾರ್ ನಟ ಟೊವಿನೋ ಥಾಮಸ್ ಸಹ ‘ಡ್ರ್ಯಾಗನ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಟೊವಿನೊ ಥಾಮಸ್ ಅವರಿಗೆ ಇದು ಮೊದಲ ತೆಲುಗು ಸಿನಿಮಾ ಆಗಿದೆ. ಈ ಹಿಂದೆ ಎರಡು ತಮಿಳು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಇದು ಅವರಿಗೆ ಮೊದಲ ತೆಲುಗು ಸಿನಿಮಾ ಆಗಿದೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಸಿನಿಮಾ ಇದೇ ವರ್ಷದ ಅಂತ್ಯದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ