ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ದೊಡ್ಡ ಪ್ರಮಾದ ಎಸಗಿದೆ. 77ನೇ ಗಣರಾಜ್ಯೋತ್ಸವ ಸ್ವಾಗತ ಫಲಕಗಳಲ್ಲಿ ಜಿಬಿಎ ಬದಲಿಗೆ ಹಳೆಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರನ್ನೇ ಅಳವಡಿಸಲಾಗಿದೆ. ಜಿಬಿಎ ರಚನೆಯಾಗಿ ಸಾಕಷ್ಟು ಸಮಯ ಕಳೆದರೂ, ರಾಜ್ಯ ಮಟ್ಟದ ಮಹತ್ವದ ಕಾರ್ಯಕ್ರಮದಲ್ಲಿ ಈ ರೀತಿಯ ಎಡವಟ್ಟು ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ರಾಜ್ಯಪಾಲರು ಭಾಗವಹಿಸುವ ಈ ಕಾರ್ಯಕ್ರಮಕ್ಕೆ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಯಿತು. ಆದರೂ ಸ್ವಾಗತ ಬೋರ್ಡ್‌ಗಳಲ್ಲಿ ಜಿಬಿಎ ಬದಲಿಗೆ ಬಿಲ್ಲು ಎಂದು ಬರೆಯಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ