400 ಕೋಟಿ ದರೋಡೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಚುನಾವಣೆಗಾಗಿ ಹಣ ಸಾಗಿಸಲಾಗ್ತಿತ್ತಾ?

400 ಕೋಟಿ ದರೋಡೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಚುನಾವಣೆಗಾಗಿ ಹಣ ಸಾಗಿಸಲಾಗ್ತಿತ್ತಾ?


ಬೆಳಗಾವಿ, ಜನವರಿ 26: ಚೋರ್ಲಾ ಘಾಟ್ ಬಳಿ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್ಗಳು ದರೋಡೆಯಾದ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಅಕ್ಟೋಬರ್‌ನಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಣ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ವೆಚ್ಚಕ್ಕೆ ಸಾಗಿಸಲು ಎಂಬ ಅನುಮಾನಗಳು ಇವೆ. ಮಹಾರಾಷ್ಟ್ರ ಸರ್ಕಾರ ಈ ರಾಬರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದ್ದಾರೆ. ಮತ್ತೊಂದೆಡೆ ಗಂಭೀರ ಆರೋಪ ಮಾಡಿರುವ ಕರ್ನಾಟಕ ಬಿಜೆಪಿ ಎಂಎಲ್ಸಿ ರವಿಕುಮಾರ್, ಗೋವಾದಿಂದ ತಿರುಪತಿಗೆ ಹಣ ಸಾಗಿಸಿ ಹೊಸ ನೋಟುಗಳನ್ನು ಬದಲಾಯಿಸುವ ಯೋಜನೆ ಇತ್ತು. ಜೊತೆಗೆ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ, ಪಾಂಡಿಚೇರಿ ಸೇರಿದಂತೆ ಐದು ರಾಜ್ಯಗಳ ಚುನಾವಣೆಗೆ ಹಣ ಸರಬರಾಜು ಆಗುತ್ತಿತ್ತಾ ಎಂಯೂ ತನಿಖೆ ನಡೆಯಬೇಕು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ. ಪಾಟೀಲ್ ಕೂಡ ಹಣದ ಮೂಲದ ಬಗ್ಗೆ ಪ್ರಶ್ನಿಸಿ, ತನಿಖೆಗೆ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *