ಉಡುಪಿ,ಜನವರಿ 26: ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆಯಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರವು ಸಾರ್ವಜನಿಕರಿಗೆ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಚಿರತೆಗಳನ್ನು ಶೀಘ್ರವಾಗಿ ಸೆರೆಹಿಡಿದು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.