
ಮೂಲತಃ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನವರಾದ ಕೀರ್ತಿ ಅವರಿಗೆ 2023ರ ನವೆಂಬರ್‌ನಲ್ಲಿ ಗುರುಪ್ರಸಾದ್ ಎಂಬುವವರೊಂದಿಗೆ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಪೋಷಕರು ಮಗಳ ಸುಖಜೀವನಕ್ಕಾಗಿ ಸುಮಾರು 35 ಲಕ್ಷ ರೂಪಾಯಿ ಖರ್ಚು ಮಾಡಿ ವಿವಾಹ ನೆರವೇರಿಸಿದ್ದರು.
ಮದುವೆಯಾದ ಹೊಸತರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಕಳೆದ ಕೆಲವು ತಿಂಗಳುಗಳಿಂದ ಪತಿ ಗುರುಪ್ರಸಾದ್ ಮತ್ತು ಕುಟುಂಬಸ್ಥರು ಹೆಚ್ಚುವರಿ ಹಣಕ್ಕಾಗಿ ಕೀರ್ತಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲು ಆರಂಭಿಸಿದ್ದರು ಎನ್ನಲಾಗಿದೆ.