CUSMA ನಿಯಮಗಳಿಗೆ ಬದ್ಧ; ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಇಲ್ಲ: ಕೆನಡಾ ಹೇಳಿಕೆ

CUSMA ನಿಯಮಗಳಿಗೆ ಬದ್ಧ; ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಇಲ್ಲ: ಕೆನಡಾ ಹೇಳಿಕೆ


ಜನವರಿ 26: ಚೀನಾದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವುದೇ ಯೋಚನೆ ಇಲ್ಲ ಎಂದು ಕೆನಡಾ ಹೇಳಿದೆ. ಚೀನಾದೊಂದಿಗೆ ಕೆನಡಾ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ, ಆ ದೇಶದ ಮೇಲೆ ಶೇ. 100 ಟ್ಯಾರಿಫ್ ಹಾಕುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಕೆನಡಾದಿಂದ ಈ ಸ್ಪಷ್ಟನೆ ಬಂದಿದೆ. ಕೆನಡಾ ಪ್ರಧಾನಿ ಮಾರ್ಕ್ ಕಾರ್ನೀ (ಮಾರ್ಕ್ ಕಾರ್ನಿ) ಅವರು ಈ ಸ್ಪಷ್ಟನೆ ನೀಡಿದ್ದಾರೆ.

‘ಮುಂಚಿತವಾಗಿ ಸೂಚನೆ ಇಲ್ಲದೆ, ಮುಕ್ತ ಮಾರುಕಟ್ಟೆಯ ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ CUSMA (Canada US Mexico Agreement) ನಿಯಮಗಳಿಗೆ ಬದ್ಧರಾಗಿದ್ದೇವೆ. ಚೀನಾ ಆಗಲೀ ಇತರ ಇತರ ನಾನ್ ಮಾರ್ಕೆಟ್ ಏಕನಾಮಿಯ (ಮಾರುಕಟ್ಟೆಯೇತರ ಆರ್ಥಿಕತೆ) ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಯಾವ ಉದ್ದೇಶವೂ ಇಲ್ಲ’ ಎಂದು ಕೆನಡಾ ಪ್ರಧಾನಿ ಮಾರ್ಕ್ ಕಾರ್ನೀ ಹೇಳಿದ್ದಾರೆ.

ಇದನ್ನೂ ಓದಿ: ಯೂರೋಪ್ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110 ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ?

ಏನಿದು CUSMA ಒಪ್ಪಂದ?

ಇದು ಕೆನಡಾ, ಅಮೆರಿಕ ಮತ್ತು ಮೆಕ್ಸಿಕೋ ದೇಶಗಳ ಮಧ್ಯೆ ಇರುವ ಮುಕ್ತ ವ್ಯಾಪಾರ ಒಪ್ಪಂದವಾಗಿದೆ. ಮಾರುಕಟ್ಟೆ ನಿರ್ದೇಶಿತ ಆರ್ಥಿಕತೆ ಅಲ್ಲದ ಇತರ ದೇಶಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮುನ್ನ ತಮಗೆ ಮುಂಚಿತವಾಗಿ ತಿಳಿಸಬೇಕು ಈ ಮೂರೂ ದೇಶಗಳು ಪರಸ್ಪರ ನಿರ್ಬಂಧಗಳನ್ನು ಹಾಕಿಕೊಂಡಿವೆ. ಅಂದರೆ, ಚೀನಾ, ಉತ್ತರ ಕೊರಿಯಾ, ಇರಾನ್ ಇತ್ಯಾದಿ ಮುಕ್ತವಲ್ಲದ ಮಾರುಕಟ್ಟೆ ಇರುವ ದೇಶಗಳೊಂದಿಗೆ ಟ್ರೇಡ್ ಡೀಲ್ ಮಾಡಿಕೊಳ್ಳಲು ನಿರ್ಬಂಧಗಳಿವೆ.

‘ಅಮೆರಿಕ ಮತ್ತು ಮೆಕ್ಸಿಕೋ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿರುವ ನಿಯಮಗಳಿಗೆ ಕೆನಡಾ ಬದ್ಧವಾಗಿಯೇ ಇದೆ. ಕಳೆದ ವರ್ಷದಿಂದ ಚೀನಾದೊಂದಿಗೆ ಉದ್ಭವಿಸಿದ ಕೆಲ ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಮಾಡಿದ್ದೇವಷ್ಟೇ’ ಎಂದು ಕೆನಡಾ ಪ್ರಧಾನಿಗಳು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆ್ಯಪಲ್‌ನಂತಹ ಮೊಬೈಲ್ ಕಂಪನಿ ಸದ್ಯದಲ್ಲೇ ಶುರುವಾಗುತ್ತಾ? ಡಾವೊಸ್ನಲ್ಲಿ ಸುಳಿವು ಕೊಟ್ಟ ಸಚಿವರು

ಕೆನಡಾವನ್ನು ಚೀನಾ ನುಂಗಿ ನೀರು ಕುಡಿಯುತ್ತೆ ಎಂದ ಟ್ರಂಪ್

ಚೀನಾದೊಂದಿಗೆ ಕೆನಡಾ ನಡೆಸುತ್ತಿದೆ ಎನ್ನಲಾದ ಮಾತುಕತೆಗಳ ವಿಚಾರದಲ್ಲಿ ಅಮೆರಿಕ ಕೆಂಗಣ್ಣು ಬೀರಿದೆ. ಚೀನಾದೊಂದಿಗೆ ಒಪ್ಪಂದ ಮಾಡಿಕೊಂಡರೆ ಕೆನಡಾ ಕಥೆ ಮುಗಿಯುತ್ತದೆ. ಅದು ವ್ಯವಸ್ಥಿತವಾಗಿ ಸ್ವನಾಶ ಮಾಡಿಕೊಳ್ಳುತ್ತಿದೆ ಎಂದು ಟ್ರಂಪ್ ತಮ್ಮ ಸೋಶಿಯಲ್ ಮೀಡಿಯಾ ಪೋಸ್ ಟ್ಗಲ್ಲಿನಲ್ಲಿ ನಿರ್ಧರಿಸಿದರು.

‘ಕೆನಡಾವನ್ನು ಚೀನಾ ಜೀವಂತವಾಗಿ ತಿಂದು ಪೂರ್ಣ ನುಂಗಿ ಹಾಕುತ್ತದೆ. ಅದರ ವ್ಯವಹಾರಗಳು, ಸಾಮಾಜಿಕ ವ್ಯವಸ್ಥೆ, ಜನಜೀವನ ಎಲ್ಲವನ್ನೂ ನಾಶಮಾಡುತ್ತದೆ. ಒಂದು ಕಾಲದಲ್ಲಿ ಶ್ರೇಷ್ಠ ದೇಶವೆನಿಸಿದ ಕೆನಡಾವನ್ನು ಚೀನಾ ಪೂರ್ಣವಾಗಿ ಸ್ವಾಹ ಮಾಡುತ್ತಿರುವುದನ್ನು ನೋಡಲು ಕಷ್ಟವಾಗುತ್ತಿದೆ’ ಎಂದು ಅಮೆರಿಕ ಅಧ್ಯಕ್ಷರು ವ್ಯಾಕುಲತೆ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *