ಮಂಗಳೂರಿನ ಬಹುಕೋಟಿ ಒಡೆಯನ ಆಶ್ರಯದಲ್ಲಿದ್ದ ರಾಜೀವ್ ಗೌಡ ಸಿಕ್ಕಿದ್ದಿದ್ಹೇಗೆ ಗೊತ್ತಾ?

ಮಂಗಳೂರಿನ ಬಹುಕೋಟಿ ಒಡೆಯನ ಆಶ್ರಯದಲ್ಲಿದ್ದ ರಾಜೀವ್ ಗೌಡ ಸಿಕ್ಕಿದ್ದಿದ್ಹೇಗೆ ಗೊತ್ತಾ?


ಬೆಂಗಳೂರು, (ಜನವರಿ 26): ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ​​ಅಮೃತಾಗೌಡ ಅವರನ್ನು ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ರಾಜೀವ್ ಗೌಡನ (ರಾಜೀವ್ ಗೌಡ) ಬಂಧನವಾಗಿದೆ. ಕಳೆದ 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಇಂದು (ಜನವರಿ 26) ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಮುಖವಾಗಿ ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರು (ಮಂಗಳೂರು) ಬಹುಕೋಟಿ ಒಡೆಯ ಆಶ್ರಯ ನೀಡಿದ್ದ ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ. ಹೌದು…ಆಶ್ರಯ ನೀಡಿದ್ದ ಉದ್ಯಮಿಯ ಕಾರಿನ ಮೂಲಕ ಇಂದು (ಜನವರಿ 26) ಮಂಗಳೂರಿನಿಂದ ಕೇರಳಕ್ಕೆ (ಕೇರಳ) ಪರಾರಿಯಾಗುತ್ತಿರುವ ವೇಳೆ ರಾಜೀವ್ ಗೌಡನನ್ನು ಪೊಲೀಸರು ಹಿಡಿದು ಕೋಲು ತೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜೀವ್ ಗೌಡ ಸಿಕ್ಕಿಬಿದ್ದಿದ್ಹೇಗೆ?

ಜನವರಿ 12ರಂದು ಶಿಡ್ಲಘಟ್ಟದ ​​ಪೌರಾಯುಕ್ತೆ ಅಮೃತಾ ಗೌಡಗೆ ಕಲ್ಟ್ ಸಿನಿಮಾ ಬ್ಯಾನರ್ ತೆರೆವು ಮಾಡಿದ್ದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದ. ಜನವರಿ 14ರಂದು ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ 13 ದಿನಗಳಿಂದ ಚಿಕ್ಕಬಳ್ಳಾಪುರ ಬಿಟ್ಟು ಪರಾರಿಯಾಗಿದ್ದ. ಇದರಲ್ಲೇ ಜನವರಿ 24ರಂದು ರಾಜೀವ್ನನ್ನು ಕೆಪಿಸಿಸಿ ಶಿಸ್ತುಸಮಿತಿ ಅಮಾನತು ಮಾಡಿತ್ತು. ಜೊತೆಗೆ ಎಫ್‌ಐಆರ್ ರದ್ದುಕೋರಿ ರಾಜೀವ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಬಳಿ 3 ದಿನದಿಂದ ಆಶ್ರಯ ಪಡೆದಿದ್ದ. ಇನ್ನು ಪೊಲೀಸರು ಕಣ್ತಪ್ಪಿಸಲು ಮಂಗಳೂರು ಸ್ಟೇಷನ್ ನಲ್ಲಿ ಕಾರು ನಿಲ್ಲಿಸಿ ಕಳ್ಳಾಟ ಆಡಿದ್ದ. ಯಾವುದೇ ಉದ್ಯಮಿ ಕಾರಿನಲ್ಲೇ ತಲಪಾಡಿ ಮಾರ್ಗವಾಗಿ ಕಾಸರಗೋಡಿನತ್ತ ಹೋಗುತ್ತಿದ್ದ ರಾಜೀವ್ ಗೌಡನನ್ನು ಹಿಡಿದು ಕೈಗೆ ಕೋಳ ತೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್; ಆರೋಪಿ ರಾಜೀವ್ ಗೌಡ ಕೊನೆಗೂ ಅರೆಸ್ಟ್!

ಪೊಲೀಸರು ಕಣ್ತಿಪ್ಪಿಸಲು ಯತ್ನಿಸಿದ ಆರೋಪಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ​​ಪೌರಾಯುಕ್ತೆ ಅಮೃತಾಗೌಡಗೆ ಧಮ್ಕಿ ಹಾಕಿ ಕಳೆದ 14 ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನಿಗೆ ಶ್ರೀಮಂತ ಉದ್ಯಮಿಯೊಬ್ಬರು ಆಶ್ರಯ ಕೊಟ್ಟಿದ್ದರು. ಆದರೆ, ಇಂದು (ಜನವರಿ 26) ರಾಜೀವ್ ಗೌಡ, ಮಂಗಳೂರಿನ ಉದ್ಯಮಿಯ ಆಶ್ರಯದಲ್ಲಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ತಿಳಿಯದಂತೆ ಬಂಧನಕ್ಕೆ ಬಲೆ ಬೀಸಿದ್ದರು. ಈ ವಿಚಾರ ತಿಳಿಯದಂತೆ ಪೊಲೀಸರ ದಿಕ್ಕು ತಪ್ಪಿಸಿದ ಆರೋಪಿ ರಾಜೀವ್ ಗೌಡ, ತನ್ನ ಕಾರು ಮಂಗಳೂರಿನ ನಿಲ್ದಾಣದಲ್ಲಿ ನಿಲ್ಲಿಸಿದ್ದ. ಬಳಿಕ ಆಶ್ರಯ ಕೊಟ್ಟಿದ್ದ ಉದ್ಯಮಿಯ ಕಾರಿನಲ್ಲಿ ತಲಪಾಡಿ ಮಾರ್ಗವಾಗಿ ಕಾಸರಗೋಡು ಕಡೆ ಹೋಗಿದ್ದ.

ಉದ್ಯಮಿ ಕಾರಿನಲ್ಲಿ ಪರಾರಿಗೆ ಯತ್ನ

ಮಂಗಳೂರು ರೈಲು ನಿಲ್ದಾಣದಲ್ಲಿ ತನ್ನ ಕಾರು ಬಿಟ್ಟು ಉದ್ಯಮಿಯ ಕಾರಿನಲ್ಲಿ ಹೋಗಿದ್ದಾನೆ ಎಂದು ತಿಳಿದು, ಉದ್ಯಮಿಯ ಕಾರು ಯಾವ ಕಡೆ ಹೋಗಿದೆ ಎನ್ನುವುದನ್ನು ಕಾರ್ಯಚರಣೆ ನಡೆಸಿದ್ದು, ಆಗ ತಲಪಾಡಿ ಮಾರ್ಗವಾಗಿ ಕಾಸರಗೋಡು ಕಡೆ ತೆರಳಿರುವ ಮಾಹಿತಿ ಇದೆ. ಬಳಿಕ ಇದೇ ಮಾರ್ಗದಲ್ಲಿ ಉದ್ಯಮಿಯ ಕಾರು ಜಾಡು ಹಿಡಿದು ಹೊರಟ ಶಿಡ್ಲಘಟ್ಟ ಪೊಲೀಸ್ ವೃತ್ತ ನಿರೀಕ್ಷಕ ಆನಂದಕುಮಾರ್ ತಂಡಕ್ಕೆ ಕೇರಳ ಗಡಿ ಭಾಗದಲ್ಲಿ ಆರೋಪಿ ರಾಜೀವ್ ಗೌಡ ಸಿಕ್ಕಿಬಿದ್ದಿದ್ದಾನೆ.

ಸದ್ಯ ಪೊಲೀಸ್ ವೃತ್ತ ನಿರೀಕ್ಷಕ ಆನಂದಕುಮಾರ್ ತಂಡ, ಕೇರಳದ ಗಡಿಭಾಗದಿಂದ ರಾಜೀವ್ಗೌಡನನ್ನು ಶಿಡ್ಲಘಟ್ಟ ನಗರ ಠಾಣೆಗೆ ಕರೆತರಲಾಯಿತು ಬಳಿಕ, ಚಿಂತಾಮಣಿ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ರಾಜೀವ್ ಗೌಡ ವಿರುದ್ಧ ಜನೆವರಿ 14 ರಂದು ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಎರಡು ದೂರುಗಳು ದಾಖಲಾಗಿವೆ. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡರಿಂದ ಒಂದು ದೂರು. ಶಾಸಕ ರವಿಕುಮಾರ್ ಪರವಾಗಿ ಒಂದು ದೂರು ದಾಖಲಾಗಿತ್ತು. ಬೆದರಿಕೆ ಪತ್ರ ಹಿನ್ನೆಲೆ ಮೊನ್ನೆ ಮತ್ತೊಂದು ದೂರು ದಾಖಲಾಗಿತ್ತು. ಹೀಗಾಗಿ ರಾಜೀವ್ ಗೌಡ ಬಂಧನಕ್ಕೆ ರಾಜ್ಯದ್ಯಂತ ಒತ್ತಯ ಕೇಳಿ ಬಂದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 8:10 pm, ಸೋಮ, 26 ಜನವರಿ 26



Source link

Leave a Reply

Your email address will not be published. Required fields are marked *