Headlines

ಕತ್ತರಿಸಿದರೂ ಸಾಯದೆ ಚಡಪಡಿಸುತ್ತಿರುವ ಮೀನು! ಮಲ್ಪೆ ಬಂದರಿನಲ್ಲಿ ಅಚ್ಚರಿ ಮೂಡಿಸಿದ ವಿಚಿತ್ರ ಘಟನೆ

ಕತ್ತರಿಸಿದರೂ ಸಾಯದೆ ಚಡಪಡಿಸುತ್ತಿರುವ ಮೀನು! ಮಲ್ಪೆ ಬಂದರಿನಲ್ಲಿ ಅಚ್ಚರಿ ಮೂಡಿಸಿದ ವಿಚಿತ್ರ ಘಟನೆ


ಉಡುಪಿ, ಜನವರಿ 27: ಗ್ರಾಹಕರ ನೀಡಲೆಂದು ಕತ್ತರಿಸಿದ ಬಂಗುಡೆ ಮೀನೊಂದು ಸಾಯದೆ ಮತ್ತೂ ಚಡಪಡಿಸಿದ ಅಚ್ಚರಿಯ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ. ಮಲ್ಪೆ ಬಂದರಿನಲ್ಲಿ ಮೀನು ಖರೀದಿಗೆ ಬಂದಿದ್ದ ಗ್ರಾಹಕ, ಮೀನು ಮಾರಾಟ ಮಾಡುವ ಮಹಿಳೆಯ ಬಳಿ ಬಂಗುಡೆ ಮೀನು ಖರೀದಿಸಲಾಗಿದೆ. ಮೀನನ್ನು ಅಲ್ಲಿಯೇ ಕತ್ತರಿಸಿ ಕೊಡುವಂತೆ ಕೇಳಿಕೊಂಡಾಗ, ಮಹಿಳೆ ಮೀನನ್ನು ಕತ್ತರಿಸಿ ಟಬ್‌ಗೆ ಹಾಕಿದ್ದಾರೆ. ಆದರೆ, ಕತ್ತರಿಸಿದ ಬಳಿಕವೂ ಮೀನು ಜೀವಂತವಾಗಿ ಚಡಪಡಿಸುತ್ತಿರುವುದು ಗಮನಕ್ಕೆ ಬಂದಿದೆ.

ಈ ವಿಚಿತ್ರ ದೃಶ್ಯವನ್ನು ಕಂಡು ಅಲ್ಲಿದ್ದ ಇತರ ಮೀನುಗಾರರು ಹಾಗೂ ಗ್ರಾಹಕರು ಹೌಹಾರಿದ್ದು, ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಇದೀಗ ಕತ್ತರಿಸಿದ ಬಳಿಕವೂ ಜೀವಂತವಾಗಿರುವ ಮೀನಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *