ಶಿಡ್ಲಘಟ್ಟ ಬೆದರಿಕೆ ಪ್ರಕರಣ: ಆಶ್ರಯ ನೀಡಿದ್ದ ಉದ್ಯಮಿಗೆ ರಿಲೀಫ್, ರಾಜೀವ್ ಗೌಡನಿಗೆ ಶಾಕ್

ಶಿಡ್ಲಘಟ್ಟ ಬೆದರಿಕೆ ಪ್ರಕರಣ: ಆಶ್ರಯ ನೀಡಿದ್ದ ಉದ್ಯಮಿಗೆ ರಿಲೀಫ್, ರಾಜೀವ್ ಗೌಡನಿಗೆ ಶಾಕ್


ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಬೆದರಿಕೆ ಪ್ರಕರಣ (ಸಿಡ್ಲಘಟ್ಟ ಅಧಿಕೃತ ಬೆದರಿಕೆ ಪ್ರಕರಣ) ಆರೋಪಿ ರಾಜೀವ್ ಗೌಡನಿಗೆ (ರಾಜೀವ್ ಗೌಡ) ಕೋರ್ಟ್ ಶಾಕ್ ಕೊಟ್ಟಿದೆ. ರಾಜೀವ್ ಗೌಡಗೆ ಮಧ್ಯಂತರ ಜಾಮೀನು ನೀಡಲು ಶಿಡ್ಲಘಟ್ಟದ ​​ಜೆಎಂಎಫ್ ಸಿ ಕೋರ್ಟ್ ನಿರಾಕರಿಸಿದೆ. ಬದಲಿಗೆ 14 ದಿನ ಅಂದರೆ ಫೆಬ್ರವರಿ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ. ಇನ್ನೊಂದೆಡೆ ಆರೋಪಿ ರಾಜೀವ್ ಗೌಡನಿಗೆ ಆಶ್ರಯ ನೀಡಿ ಪೊಲೀಸರ ಬಂಧನಕ್ಕೊಳಗಾಗಿದ್ದ ಮಂಗಳೂರಿನ ಉದ್ಯಮಿಗೆ ಜಾಮೀನು ಸಿಕ್ಕಿದೆ.

ಸರಕಾರಿ ವಕೀಲರ ಪ್ರಬಲ ವಾದ

ಇನ್ನು ವಿಚಾರಣೆ ವೇಳೆ ಪರ ವಕೀಲರು ರಾಜೀವ್ ಗೌಡನ ವಿರುದ್ಧ ಪ್ರಬಲ ವಾದ ಮಂಡಿಸಿದರು. ಆರೋಪಿ ಮಹಿಳಾ ಅಧಿಕಾರಿ ವಿರುದ್ಧ ಅತ್ಯಂತ ಕೆಟ್ಟದಾಗಿ ಮಾತನಾಡಿದ್ದಾರೆ. ಆ ಶಬ್ದಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಮೊಬೈಲ್ ಈ ವಶಪಡಿಸಿಕೊಳ್ಳಬೇಕಿದೆ. ಯಾವೆಲ್ಲಾ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದರು ಎಂಬ ಬಗ್ಗೆ ಮಹಜರು ನಡೆಸಬೇಕಾಗಿರುವುದರಿಂದ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ’ ಎಂದು ವಾದ ಮಂಡಿಸಿದರು. ಜೊತೆಗೆ, ಬಿಎನ್‌ಎಸ್ 132 (ಬಿಎನ್‌ಎಸ್ 132) ಸೆಕ್ಷನ್ ಅಡಿ ಪ್ರಕರಣದ ಗಾಂಭೀರ್ಯವನ್ನು ನ್ಯಾಯಾಧೀಶರ ಗಮನಕ್ಕೆ ತಂದರು.

ಆರೋಪಿ ಪರ ವಕೀಲರ ಪ್ರತಿವಾದ

ರಾಜೀವ್ ಗೌಡ ಪರ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದ್ದು, ಇದು ರಾಜಕೀಯ ಪ್ರೇರಿತ ದೂರು. ಘಟನೆ ನಡೆದ ಎರಡು ದಿನಗಳ ನಂತರ ದೂರು ನೀಡಲಾಗಿದೆ. ಆರೋಪಿಯು ಮಾಧ್ಯಮಗಳ ಮೂಲಕ ಕ್ಷಮೆಯನ್ನೂ ಕೇಳಿದ್ದಾರೆ. ಕೇವಲ ಜೈಲಿಗೆ ಹಾಕಬೇಕೆಂಬ ಉದ್ದೇಶದಿಂದ ಸೆಕ್ಷನ್ ಹಾಕಲಾಗಿದೆ. ಹೀಗಾಗಿ ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಎರಡೂ ಕಡೆ ವಾದ ಪ್ರತಿವಾದ ಆಲಿಸಿದ ಕೋರ್ಟ್, ಜಾಮೀನು ಅರ್ಜಿಯನ್ನು ವಜಾಗೊಳಿಸಿ ರಾಜೀವ್ ಗೌಡನನ್ನು ಜೈಲಿಗಟ್ಟಿದೆ.

ಕಳೆದ 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನಿ (ಜನವರಿ 26) ಕೇರಳದ ಗಡಿಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಜೊತೆಗಿದ್ದ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್‌ನನ್ನು ಸಹ ಫೋಲೀಸರು ಬಂಧಿಸಿ ಶಿಡ್ಗಘಟಕ್ಕೆ ಕರೆತಂದಿದ್ದರು. ಬಳಿಕ ಆರೋಪಿಗಳಿಗೆ ವೈದ್ಯಕೀಯ ತಪಾಸಣೆ ಮಾಡಿಸಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಈ ವೇಳೆ ರಾಜೀವ್ ಗೌಡ ಪರ ವಕೀಲರು ಸಹ ಮಧ್ಯಂತರ ಜಾಮೀನಿಗೆ ಮನವಿ ಮಾಡಿದರು. ಆದರೆ, ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ರಾಜೀವ್ ಗೌಡನಿಗೆ ಫೆಬ್ರವರಿ 9 ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇನ್ನು ರಾಜೀವ್ ಗೌಡನ ಆಶ್ರಯದಾಯ ಮೈಕಲ್‌ಗೆ ಕೋರ್ಟ್ ಜಾಮೀನು ನೀಡಿದೆ.

ರಂದು ಪ್ರಕಟಿಸಲಾಗಿದೆ – 7:17 pm, ಮಂಗಳವಾರ, 27 ಜನವರಿ 26



Source link

Leave a Reply

Your email address will not be published. Required fields are marked *