ಕಾರವಾರ, ಜನವರಿ 28: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರ ಹಕ್ಕಲದಲ್ಲಿ ಆರೋಗ್ಯಕಾರಿ ಘಟನೆಯೊಂದು ನಡೆದಿದೆ. ಕುಟುಂಬದವರು ಹಚ್ಚ ಜಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಯುವಕನೊಬ್ಬ ದಿನಕರ್ ಎಂಬುವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಕುಮಟಾದ ವೆಂಕಟರಮಣ ಜಾತ್ರೆಗೆ ದಿನಕರ್ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ 18 ವರ್ಷದ ಫೈಸಾನ್ ಜಾಫರ್ ಶೇಕ್ ಎಂಬ ಯುವಕ ಅವರ ಮನೆಗೆ ಬೆಂಕಿ ಹಚ್ಚಿ ದ್ವೇಷ ಸಾಧಿಸಲು ಯತ್ನಿಸಿದ್ದಾನೆ. ಇನ್ನು ಬೆಂಕಿ ಹಚ್ಚಿದ ಆರೋಪಿಯನ್ನು ಸ್ಥಳೀಯರು ಹಿಡಿದಿದ್ದಾರೆ. ಸಾರ್ವಜನಿಕರ ಸಮಯದಿಂದ ಹೆಚ್ಚಿನ ಅನಾಹುತ ತಪ್ಪಿದೆಯಾದರೂ, ಘಟನೆಯಿಂದಾಗಿ ದೇವರ ಹಕ್ಕಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸುದ್ದಿ ತಿಳಿಯದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.