ಮಹಾಂತೇಶ್​​ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ: ಕೆಲಸ ಎಲ್ಲಿ? ಮಾಹಿತಿ ಇಲ್ಲಿದೆ

ಮಹಾಂತೇಶ್​​ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ: ಕೆಲಸ ಎಲ್ಲಿ? ಮಾಹಿತಿ ಇಲ್ಲಿದೆ


ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ನೌಕರಿ ನೀಡಿ ಆದೇಶಿಸಿದರು

ಬೆಂಗಳೂರು, ಜನವರಿ 28: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಕಾರು ಅಪಘಾತದಲ್ಲಿ ಚಾಲನೆ ನೀಡಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಇಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಿ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗ ನೀಡಿದ್ದು, ಜ.2ರಂದು ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಕಂಪದ ಉದ್ಯೋಗ ನೀಡಲು ನಿರ್ಧರಿಸಲಾಗಿದೆ.

ಆದೇಶ ಪತ್ರದಲ್ಲಿ ಏನಿದೆ?

ಭಾರತೀಯ ಆಡಳಿತ ಸೇವೆಗೆ ಸೇರಿದ ಅಧಿಕಾರಿಯಾದ ದಿವಂಗತ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿರುವಾಗಲೇ 2025ರ ನವೆಂಬರ್ 25 ರಂದು ನಿಧನ ಹೊಂದಿದರು, ಅವರ ಪುತ್ರಿಯಾದ ಚೈತನ್ಯಾ ಎಂ. ಬೀಳಗಿ, ಇವರನ್ನು ಕರ್ನಾಟಕ ನಾಗರೀಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996 ರ ನಿಯಮ 6(1)ರನ್ವಯ ಕರ್ನಾಟಕ ಸರ್ಕಾರ ಸಚಿವಾಲಯದ ಸಹಾಯಕ ಹುದ್ದೆಗೆ ಎರಡು ವರ್ಷಗಳ ಪರೀಕ್ಷಾರ್ಥಾವಧಿಯ ಅವಧಿಯ ಮತ್ತು ಷರತ್ತುಗಳಿಗೆ ಒಳಪಟ್ಟು ಅನುಕಂಪದ ಆಧಾರದ ಮೇಲೆ ನೇಮಕ ಮಾಡಲಾಗಿರೋ ಕುರಿತು ತಿಳಿಸಲಾಗಿದೆ. 15 ದಿನಗಳ ಒಳಗೆ ಹಾಜರಾಗುವಂತೆಯೂ ಸೂಚಿಸಲಾಗಿದೆ.

ಇದನ್ನೂ ಓದಿ: ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಅನುಕಂಪದ ನೌಕರರಿಗೆ ಸಂಪುಟ ಒಪ್ಪಿಗೆ, ಯಾವ ಹುದ್ದೆ?

ನವೆಂಬರ್ 25 ರಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಕಾರು ಅಪಘಾತ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಚಾಲಕ ಉಳಿಸಲು ಹೋದ ಪರಿಣಾಮ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಅಪಘಾತಕ್ಕೀಡಾಗಿತ್ತು. ಈ ವೇಳೆ ಮಹಾಂತೇಶ್ ಬಿಳಗಿ ಸೇರಿದಂತೆ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಕೂಡಿದ್ದರು.

ವರದಿ: ಈರಣ್ಣ ಬಸವ, ಟಿವಿ9 ಕನ್ನಡ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *