ಐತಿಹಾಸಿಕ ಕಥಾಹಂದರ ಹೊಂದಿರುವ ‘ದಿ 1979 ಅನ್ ಟೋಲ್ಡ್ ಸ್ಟೋರಿ’ ಸಿನಿಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರ ರಂಗದಲ್ಲಿ (ಕನ್ನಡ ಚಲನಚಿತ್ರೋದ್ಯಮ) ಇತ್ತೀಚಿಗೆ ಅನೇಕ ಹೊಸ ಪ್ರಯೋಗಗಳು ನಡೆಯುತ್ತಿವೆ. ಕಥೆ, ಪಾತ್ರಗಳ ಮೂಲಕ ಪ್ರಯೋಗ ಮಾಡಲಾಗುತ್ತಿದೆ. ಹೊಸ ಪ್ರತಿಭೆಗಳು ಹೊಸ ರೀತಿಯಲ್ಲಿ ಕಥೆಗಳನ್ನು ಹೇಳುತ್ತಿವೆ. ಅಂಥ ತಂಡಗಳ ಸಾಲಿಗೆ ‘ದಿ 1979 ಅನ್ ಟೋಲ್ಡ್ ಸ್ಟೋರಿ’ (ದಿ 1979 ಅನ್ಟೋಲ್ಡ್ ಸ್ಟೋರಿ) ಕೂಡ ಸೇರ್ಪಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಬಂಗಾಳದ ಕಥೆಯನ್ನು ತೋರಿಸಲಾಗುತ್ತಿದೆ.
‘ಮನಂ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ‘ದಿ 1979 ಅನ್ ಟೋಲ್ಡ್ ಸ್ಟೋರಿ’ ಸಿನಿಮಾ ನಿರ್ಮಾಣವಾಗಿದೆ. ಈ ಸಿನಿಮಾಗೆ ಪುಷ್ಪ ರಾಜ್ ಅವರು ನಿರ್ದೇಶನ ಮಾಡಿದ್ದಾರೆ. ಬೀರಮಾನಹಳ್ಳಿ ಎಂ. ಶ್ರೀನಿವಾಸ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. 1979 ರಲ್ಲಿ ಬೆಂಗಳೂರಿನಲ್ಲಿ ನಡೆದ ರಿಯಲ್ ಘಟನೆಗಳನ್ನು ಆಧರಿಸಿ, ಕಾಲ್ಪನಿಕ ಕಥೆಯನ್ನು ಹೆಣೆಯಲಾಗಿದೆ.
1979 ಅನ್ಟೋಲ್ಡ್ ಸ್ಟೋರಿ ಟೀಮ್
‘ದಿ 1979 ಅನ್ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸಂಪೂರ್ಣ ಕಥೆಯು ಬಂಗಾಳದ ಹಿನ್ನೆಲೆಯನ್ನು ಹೊಂದಿದೆ. ವಿಶೇಷ ಏನೆಂದರೆ, ಕಥೆ ಬಂಗಾಳದ್ದು ಆದರೂ ಈ ಸಿನಿಮಾದ ಶೂಟಿಂಗ್ ನಡೆದಿರುವುದು ಕೋಲಾರದಲ್ಲಿ! ಆ ಕಾರಣದಿಂದಲೂ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ‘ದಿ 1979 ಅನ್ ಟೋಲ್ಡ್ ಸ್ಟೋರಿ’ ಸಿನಿಮಾದ ಟೀಸರ್ ಬಿಡುಗಡೆಯಾಯಿತು.
‘ದಿ 1979 ಅನ್ ಟೋಲ್ಡ್ ಸ್ಟೋರಿ’ ಟೀಸರ್:
ಜನವರಿ 23 ರಂದು ‘ಮ್ಯೂಸಿಕ್ ಬಜಾರ್’ ಯೂಟ್ಯೂಬ್ ಚಾನೆಲ್ ಮೂಲಕ ಟೀಸರ್ ಅನಾವರಣ ಆಯಿತು. ರಾಜಕೀಯ, ಅಧಿಕಾರ, ಆಡಳಿತ, ಸ್ವಾಭಿಮಾನ, ನೋವು, ಹಿಂಸೆ ಮುಂತಾದ ಅಂಶಗಳು ಈ ಟೀಸರ್ ನಲ್ಲಿ ಕಾಣಿಸುತ್ತದೆ. ತಾಂತ್ರಿಕವಾಗಿಯೂ ಈ ಸಿನಿಮಾದ ಮೇಕಿಂಗ್ ಗಮನ ಸೆಳೆದಿದೆ. ಶೀಘ್ರದಲ್ಲೇ ಈ ಸಿನಿಮಾದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆ ಆಗಲಿವೆ.
ಇದನ್ನೂ ಓದಿ: ರವಿತೇಜ ನಟನೆಯ 77ನೇ ಸಿನಿಮಾಗೆ ‘ಇರುಮುಡಿ’ ಶೀರ್ಷಿಕೆ: ಫಸ್ಟ್ ಲುಕ್ ರಿಲೀಸ್
ಈ ರಿಲೀಸ್ ಡೇಟ್ ಇನ್ನೂ ಬಹಿರಂಗ ಆಗಿಲ್ಲ. ಆದರೆ ಫೆಬ್ರವರಿ ತಿಂಗಳಲ್ಲೇ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಅಜ್ಜು, ಪ್ರಾನ್ವಿ ಗೌಡ, ಸುಜಿತ್, ಅಮೃತ ಗೌಡ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಚಲಾಕಿ ಚರಣ್ ಅವರ ಛಾಯಾಗ್ರಹಣ, ಜಶ್ವಂತ್ ವಸುವುಲೇಟಿ ಅವರ ಸಂಗೀತ ನಿರ್ದೇಶನ ಈ ಸಿನಿಮಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.