Headlines

ಬೋರ್‌ವೆಲ್ ಲಾರಿಗೆ ಗುದ್ದಿದ ಬೊಲೆರೊ ಜೀಪ್: ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು, ಕೂಲಿ ಮಾಡಿ ಮನೆಗೆ ಮರಳುವಾಗ ದುರಂತ | Chikkamagaluru Laborer Dies As Bolero Crashes Borewell Truck

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಬಳಿ ಕೂಲಿ ಕೆಲಸ ಮುಗಿಸಿ ಮರಳುತ್ತಿದ್ದ ಕಾರ್ಮಿಕರಿದ್ದ ಬೊಲೆರೊ ಜೀಪ್, ನಿಂತಿದ್ದ ಬೋರ್‌ವೆಲ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರೆ.

ಚಿಕ್ಕಮಗಳೂರು (ಜ.28): ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಬಳಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಲ್ಲತ್ತಿಗಿರಿಯಿಂದ ಕೂಲಿ ಕೆಲಸ ಮುಗಿಸಿಕೊಂಡು ಎಂ.ಸಿ.ಹಳ್ಳಿಗೆ ಮರಳುತ್ತಿದ್ದ ಕಾರ್ಮಿಕರಿದ್ದ ಬೊಲೆರೊ ಜೀಪ್, ರಸ್ತೆ ಬದಿಯಲ್ಲಿ ನಿಂತಿದ್ದ ಬೋರ್‌ವೆಲ್ ಲಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಏಳು ಜನರಲ್ಲಿ ಓರ್ವ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಆರು ಮಂದಿಗೆ ಗಂಭೀರ ಗಾಯ: ಶಿವಮೊಗ್ಗಕ್ಕೆ ರವಾನೆ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಳಿದ ಆರು ಜನರನ್ನು ಕೂಡಲೇ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮೃತಪಟ್ಟವರು ಹಾಗೂ ಗಾಯಗೊಂಡವರು ಎಂ.ಸಿ.ಹಳ್ಳಿ ಮೂಲದವರಾಗಿದ್ದು, ನಿತ್ಯ ಕೂಲಿ ಕೆಲಸಕ್ಕಾಗಿ ಕಲ್ಲತ್ತಿಗಿರಿಗೆ ಹೋಗಿ ಬರುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ

ಘಟನಾ ಸ್ಥಳಕ್ಕೆ ತರೀಕೆರೆ ಹಾಗೂ ಲಿಂಗದಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Source link

Leave a Reply

Your email address will not be published. Required fields are marked *