ಮಂಡ್ಯ, ಜನವರಿ 31: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರಯೋಜನೆಯ ಬಗ್ಗೆ ಸುಳ್ಳು ಸುದ್ದಿ ನೀಡುತ್ತಿರುವ ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾ ಬಿಜೆಪಿ ದೂರು ನೀಡಲಾಗಿದೆ. ಅಂಕಿಅಂಶಗಳ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಪತ್ರಿಕೆಗಳಿಗೆ ನೀಡಿರುವ ಜಾಹೀರಾತು ರಾಜಕೀಯ ಪಕ್ಷಪಾತದಿಂದ ಕೂಡಿದೆ. ತೆರಿಗೆದಾರರ ಹಣವನ್ನು ಕೇಂದ್ರದ ಕಾಯ್ದೆಯ ವಿರುದ್ಧ ಅಪಪ್ರಚಾರ ಮಾಡಲು ಸಾರ್ವಜನಿಕ ಹಣದ ದುರುಪಯೋಗ ಎಂದು ಬಿಜೆಪಿ ಆರೋಪಿಸಿದೆ.
ಜೊತೆಗೆ, ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ವ್ಯಂಗ್ಯಚಿತ್ರವನ್ನು ಬಳಸಿ ಕೇಂದ್ರದ ಟೀಕಿಸಿರುವುದು ಗಾಂಧೀಜಿಯವರಿಗೆ ಮಾಡಿದ ಅವಮಾನ. ಜಾಹಿರಾತು ಕೇವಲ ಟೀಕೆಯಾಗಿದ್ದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ಬರಬಹುದು, ಆದರೆ ಸಾರ್ವಜನಿಕ ಹಣವನ್ನು ಬಳಸಬಹುದಾಗಿದೆ, ಅದು ಗಂಭೀರವಾದ 215ರ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಸರ್ಕಾರಿ ಜಾಹೀರಾತುಗಳು ಕೇವಲ ಮಾಹಿತಿಯುಕ್ತ. ಯಾವುದೇ ಪಕ್ಷದ ಹಿತಾಸಕ್ತಿ ಪ್ರಚಾರ ಅಥವಾ ವಿರೋಧ ಪಕ್ಷದ ವಿರುದ್ಧ ನಕಾರಾತ್ಮಕ ಚಿತ್ರಣಕ್ಕಾಗಿ ಸಾರ್ವಜನಿಕ ಹಣ ಬಳಸಲಾಗಿದೆ. ಪ್ರಜಾಪ್ರಭುತ್ವದಲ್ಲಿ ಯಾವುದೇ ವಿಷಯದ ಬಗ್ಗೆ ಟೀಕೆ ಮಾಡಲು ಅಥವಾ ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ. ಆದರೆ, ಸರ್ಕಾರಿ ಯಂತ್ರವನ್ನು ಬಳಸಿ ಜನರ ದಾರಿ ತಪ್ಪಿಸುವಂತಹ ಅಥವಾ ಸುಳ್ಳು ಮಾಹಿತಿ ನೀಡುವಂತಹ ಅಪಪ್ರಚಾರ ಮಾಡುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ದೂರಿದೆ.
ಇದನ್ನೂ ಓದಿ: ಜಾಹೀರಾತು ಜಟಾಪಟಿಗೆ ತಿರುಗಿದ ನರೇಗಾ ಯುದ್ಧ; ಅಧಿವೇಶನದಲ್ಲೂ ‘ಗಾಂಧಿ Vs ಸಂಘಪ್ಪ’ ಸಮರ!
ಕೇಂದ್ರದ ಕಾನೂನಿನ ಬಗ್ಗೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಬಹುದು ಅಥವಾ ನ್ಯಾಯಾಲಯದಲ್ಲಿ ಸವಾಲು ಹಾಕಬಹುದು. ಆದರೆ, ಅಧಿಕೃತವಾಗಿ ಆ ಕಾನೂನನ್ನು ಜಾರಿಗೆ ತರುವಲ್ಲಿ ಅಡ್ಡಿಪಡಿಸುವುದು ಅಥವಾ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡುವುದು ಸಾಂವಿಧಾನಿಕವಾಗಿ ತಪ್ಪು. ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡು ಜಾಹೀರಾತು ನೀಡಲಾಗಿದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆ ಮುಖ್ಯಕಾರ್ಯದರ್ಶಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮಂಡ್ಯ ಜಿಲ್ಲಾ ಬಿಜೆಪಿ ಸಂಸ್ಥೆ ಇದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.