Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ


Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

ಕೆಲಸದ ಪ್ರಾರಂಭದಲ್ಲಿ ಇರುವ ಉತ್ಸಾಹ ಅದು ಮುಗಿಯುವ ತನಕ ಉಳಿಯುತ್ತಿಲ್ಲ. ನೀವು ಪ್ರಸ್ತಾವಿತ ಪ್ರಾಜೆಕ್ಟ್ ಗಳ ಬಗ್ಗೆ ಆರಂಭದಲ್ಲಿ ಮಾಡಿದ ಉತ್ಸಾಹ ತೋರುವವರು ನಂತರದಲ್ಲಿ ಆಸಕ್ತಿ ತೋರುತ್ತಿಲ್ಲ. ನಿಮ್ಮ ವೇಗಕ್ಕೆ ಸರಿಯಾಗಿ ಕೆಲವು ಬಾರಿ ಸರಿಯಾದ ಬೆಂಬಲ ದೊರೆಯುತ್ತಿಲ್ಲ ಎಂದಾದಲ್ಲಿ ಖಡ್ಗ ಮಾಲಾ ಸ್ತೋತ್ರದ ಶ್ರವಣ ಮಾಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ನಿರೀಕ್ಷೆ ಹೆಚ್ಚಾದಷ್ಟೂ ಬೇಸರ ಸಹ ಪಡುವಂತೆ ಆಗಲಿದೆ. ಉದ್ಯೋಗ ಸ್ಥಳದಲ್ಲಿ ಒತ್ತಡದ ಸನ್ನಿವೇಶಗಳನ್ನು ಎದುರಿಸುವಂತೆ ಆಗಲಿದೆ. ಚಿನ್ನ- ಬೆಳ್ಳಿ ಅಥವಾ ವಜ್ರಾಭರಣ ಖರೀದಿಗಾಗಿ ಹೆಚ್ಚಿನ ಖರ್ಚು ಮಾಡುವ ಯೋಗ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮಗೇನೋ ಅತಿ ಉತ್ಸಾಹ ಇರುತ್ತದೆ. ಆದರೆ ಸುತ್ತಮುತ್ತಲಿನವರ ಪರಿಸ್ಥಿತಿ, ಸ್ಥಿತಿಯನ್ನು ಸಹ ಅರ್ಥ ಮಾಡಿಕೊಂಡು ಮಾತುಕತೆ ನಡೆಸುವುದು ಒಳ್ಳೆಯದು. ಹಣಕಾಸಿನ ವಿಚಾರ ಮಾತನಾಡುತ್ತೀರಿ ಅಂತಾದಲ್ಲಿ ಸಾಧ್ಯಾಸಾಧ್ಯತೆಯ ಬಗ್ಗೆ ಸ್ಪಷ್ಟ ಚಿತ್ರಣ ಇರಬೇಕು. ಮನೆ ನಿರ್ಮಾಣ, ಆಸ್ತಿ ಖರೀದಿಯ ಮಾತುಕತೆಗೆ ತೆರಳುತ್ತಿದ್ದೀರಿ ಅಂತಾ ಮನೆ ದೇವರನ್ನು ಮನಸ್ಸಿನಲ್ಲಿಟ್ಟುಕೊಂಡು ನೆನಪಿಸಿಕೊಳ್ಳಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಶ್ರಮ ಹಾಗೂ ಶಿಸ್ತಿನ ಜೀವನಕ್ಕೆ ಪ್ರಾಮುಖ್ಯ ನೀಡುವ ದಿನ ಇದಾಗಿದೆ. ನೀವು ಕೈಗೆತ್ತಿಕೊಂಡಿರುವ ಕೆಲಸ- ಕಾರ್ಯಗಳು ನಿಧಾನವಾಗಿ ಮುಂದಕ್ಕೆ ಸಾಗಿದರೂ ದೃಢವಾಗಿ ಗುರಿಯತ್ತ ತಲುಪುವ ಸೂಚನೆ ದೊರೆಯುತ್ತದೆ. ಸರ್ಕಾರಿ ಕೆಲಸಗಳು ಮತ್ತು ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸ್ವಲ್ಪ ವಿಳಂಬವಾಗಬಹುದು. ಆದರೆ ತಾಳ್ಮೆ- ಸಂಯಮದಿಂದ ಮುಂದುವರಿದಲ್ಲಿ ಯಶಸ್ವಿಯಾಗಿ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *