
ಸುಮಾರು 500 ಡ್ಯಾನ್ಸರ್‌ಗಳು ಮತ್ತು ಅವರ ಕುಟುಂಬಗಳ ಆರೋಗ್ಯ ವಿಮಾ ಯೋಜನೆಗಾಗಿ ರಾಮ್ ಚರಣ್ ಸುಮಾರು 50 ಲಕ್ಷ ರೂಪಾಯಿ ಖರ್ಚು ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಲ್ಲವಾದರೂ, ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಡ್ಯಾನ್ಸರ್‌ಗಳ ಕಲ್ಯಾಣಕ್ಕಾಗಿ ಚರಣ್ ಇಷ್ಟು ದೊಡ್ಡ ಮೊತ್ತವನ್ನು ಖರ್ಚು ಮಾಡುತ್ತಿರುವುದು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ತಮ್ಮ ತಂದೆ, ಮೆಗಾಸ್ಟಾರ್ ಚಿರಂಜೀವಿ ಅವರ ಹಾದಿಯಲ್ಲೇ ಸಾಗುತ್ತಾ, ಚರಣ್ ಸಿನಿಕಾರ್ಮಿಕರ ಕಲ್ಯಾಣಕ್ಕೆ ಸದಾ ಬೆಂಬಲ ನೀಡುತ್ತಿದ್ದಾರೆ.