ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್ಷರಾದ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಜಯಮಾಲಾ (ಜಯಮಾಲಾ) ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. 1970 ರ ದಶಕದಿಂದಲೂ ನಟಿಯಾಗಿ ಜಯಮಾಲಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯಾಗಿ (ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು) ಕಾರ್ಯ ನಿರ್ವಹಿಸಿದ್ದರು. ‘ಚಿತ್ರೋದ್ಯಮದ ಹಿತದೃಷ್ಟಿಯಿಂದ ಹೊಸ ಅಧ್ಯಕ್ಷರು ಬಂದಿದ್ದಾರೆ. ಈ ವರ್ಷ ಒಳ್ಳೊಳ್ಳೆಯ ಕೆಲಸ ಮಾಡಲು ನಮಗೆಲ್ಲ ಸಹಕಾರ ನೀಡಿ, ಚಿತ್ರೋದ್ಯಮದ ಅಭಿವೃದ್ಧಿಗಾಗಿ ಕೆಲಸ ಮಾಡಲಿ’ ಎಂದು ನಿರ್ಮಾಪಕ ಕೆ. ಮಂಜು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.