ವರದಕ್ಷಿಣೆ ಪಡೆದರೂ ತೀರದ ಧನ ದಾಹ, ಸಾಲದಕ್ಕೆ ಅನುಮಾನ: ಪತಿ ಟಾರ್ಚರ್​​ಗೆ ಪತ್ನಿ ಆತ್ಮಹತ್ಯೆ

ವರದಕ್ಷಿಣೆ ಪಡೆದರೂ ತೀರದ ಧನ ದಾಹ, ಸಾಲದಕ್ಕೆ ಅನುಮಾನ: ಪತಿ ಟಾರ್ಚರ್​​ಗೆ ಪತ್ನಿ ಆತ್ಮಹತ್ಯೆ


ಹಾಸನ, ಫೆಬ್ರವರಿ 01: ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಘಟನೆ ಹಾಸನದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತರಾಗಿದ್ದರೆ, ಹೆಚ್. ಮೈಲಳ್ಳಿ ಗ್ರಾಮದ ಪತಿ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗಾಗಿ ಹಾಸನದ ಹಿಮ್ಸ್‌ಗೆ ದಾಖಲಾಗಿದ್ದರೂ ದೇಹಕ್ಕೆ ಸ್ಪಂದಿಸಿದ ಕಾರಣ ಅಂತಿಮವಾಗಿ ಯುವತಿ ಕೊನೆಯುಸಿರೆಳೆದಿದ್ದಾಳೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್. ಮೈಲಳ್ಳಿ ಗ್ರಾಮದ ಎಂ.ಎಚ್. ಸ್ವಾಮಿ ಜೊತೆ ಇಂದ್ರ ಅವರ ವಿವಾಹವಾಗಿತ್ತು. ಮದುವೆಯ ಸಮಯದಲ್ಲಿ ಪತ್ನಿ ಮನೆಯವರು ಹಣ, ಒಡವೆ ನೀಡಿದ್ದರೂ ಸ್ವಾಮಿ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು. ತಾನು ನಡೆಸುತ್ತಿದ್ದ ಬೇಕರಿ ವ್ಯವಹಾರದಲ್ಲಿಯೂ ನಷ್ಟ ಉಂಟಾದ ಬಳಿಕ ಪತಿ ಕಿರುಕುಳ ಹೆಚ್ಚಾಗುತ್ತಿದೆ. ಇದೇ ವಿಚಾರವಾಗಿ ಬಾರಿ ರಾಜಿ ಪಂಚಾಯ್ತಿ ಕೂಡ ನಡೆದಿತ್ತು. ಆದರೂ ಬದಲಾಗದ ಸ್ವಾಮಿ, ಕಿರುಕುಳ ಮುಂದುವರಿಸಿದ್ದ ಎಂದು ದೂರಲಾಗಿದೆ. ಘಟನೆ ಬೆನ್ನಲ್ಲೇ ಮೃತ ಇಂದ್ರ ಪತಿ ಸ್ವಾಮಿ, ಅತ್ತೆ ಶಂಕ್ರಮ್ಮ, ಅತ್ತಿಗೆ ಪುಟ್ಟಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ

ಮೃತ ಯುವತಿ ಅನುಮತಿ ಹೇಳಿದ್ದೇನು?

ಇನ್ನು ಪತಿ ಸ್ವಾಮಿ ವರದಕ್ಷಿಣೆ ರೂಪದಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟ ಹಿನ್ನೆಲೆ 1.3 ಲಕ್ಷ ಹಣವನ್ನು ತನ್ನ ತಾಯಿಯಿಂದ ಪಡೆದು ಪತಿಗೆ ನೀಡಿದ್ದಳು. ಬಡ್ಡಿ ಸಾಲ ಮಾಡಿ ಆ ಹಣವನ್ನು ಇಂದ್ರ ತಾಯಿ ಗೌರಮ್ಮ ನೀಡಿದ್ದರು. ಆತ್ಮಹತ್ಯೆ ಯತ್ನಕ್ಕೂ ಮುನ್ನ ತಾಯಿಗೆ ಕರೆ ಮಾಡಿದ್ದ ಇಂದ್ರ, ಕಿರುಕುಳ ಸಹಿಸಲು ಸಾಧ್ಯವಾಗುತ್ತಿಲ್ಲ. ತನ್ನನ್ನು ಬಂದು ಕರೆದುಕೊಂಡು ಹೋಗುವಂತೆ ಬೇಡಿಕೊಂಡಳು. ರಾತ್ರಿ ಸಮಯಕ್ಕೆ ತಕ್ಷಣ ತೆರಳಲು ಗೌರಮ್ಮಗೆ ಸಾಧ್ಯವಾಗಿರಲಿಲ್ಲ. ಆದರೆ ಬೆಳಿಗ್ಗೆ ವೇಳೆಗೆ ಮಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರೋದು ಪೋಷಕರಿಗೆ ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 6:48 pm, ಭಾನುವಾರ, 1 ಫೆಬ್ರವರಿ 26



Source link

Leave a Reply

Your email address will not be published. Required fields are marked *