ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಚಾಲನೆಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ
ತುಮಕೂರು, ಫೆಬ್ರವರಿ 01: ನಗರದ ವಾಹನ ಸವಾರರಿಗೆ ಕೊನೆಗೂ ಸಿಹಿ ಸುದ್ದಿ ದೊರೆತಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಆ ಮೂಲಕ ಕಾಮಗಾರಿ ಆರಂಭವಾಯಿತು. ತುಮಕೂರು ನಗರದ ಒಳಗೆ ಹಾದುಹೋಗುವ ಬಟವಾಡಿ- ಮಲ್ಲಸಂದ್ರದ (ಬಟವಾಡಿ-ಮಲ್ಲಸಂದ್ರ) 12 ಕಿ.ಮಿ ರಸ್ತೆ ದ್ವಿಪಥವನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲು ಅಧಿಕೃತವಾಗಿ ಚಾಲನೆ ದೊರೆತಿದೆ.
ರಸ್ತೆ ಇಕ್ಕಟ್ಟಿನಿಂದ ವಾಹನ ಸವಾರರಿಗೆ ಕಿರಿಕಿರಿ
ತುಮಕೂರು ನಗರದಿಂದ ಭೀಮಸಂದ್ರವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ಸವಾರರಿಗೆ ಕೊಂಚ ತೊಂದರೆಯಾಗಿತ್ತು. ಈ ಮಾರ್ಗ ರಾಷ್ಟ್ರೀಯ ಹೆದ್ದಾರಿಯಾದರೂ ಸಹ ಅಗಲೀಕರಣವಾಗದೇ ಉಳಿದಿತ್ತು. ಕಳೆದ ಹತ್ತು ವರ್ಷಗಳಿಂದ ಅಗಲೀಕರಣದ ನಿರೀಕ್ಷೆಯಲ್ಲೇ ಉಳಿದಿತ್ತು. ರಸ್ತೆ ಇಕ್ಕಟ್ಟಿನಿಂದ ನಿತ್ಯ ವಾಹನ ಸವಾರರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ. ಆದರೆ ಇದೀಗ ಆ ಕಿರಿಕಿರಿಗೆ ಅಂತ್ಯ ಹಾಡುವ ಸೂಚನೆ ಸಿಕ್ಕಿದೆ.
ಇದನ್ನೂ ಓದಿ: ಏರ್ಪೋರ್ಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ: 1 ವರ್ಷದಿಂದ 50ಕ್ಕೂ ಅಧಿಕ ಜನ ಸಾವು, ಜಾಗೃತಿ ಮೂಡಿಸಲು ಬಂದ ಯಮ
ಇತ್ತೀಚೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ ಹಲವು ವರ್ಷಗಳ ಕನಸು ನನಸಾಗಿದೆ. ಸುಮಾರು 1.ಮೀ ದೂರದವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ನಡೆಯಲಿದ್ದು, ಈ ಯೋಜನೆಗೆ ಒಟ್ಟು 86 ಕೋಟಿ ರೂ ವೆಚ್ಚ ಅಂದಾಜಿಸಲಾಗಿದೆ. ನಾಲ್ಕು ಲೇನ್ ರಸ್ತೆ ನಿರ್ಮಾಣದಿಂದ ಸಂಚಾರ ಮತ್ತಷ್ಟು ಸುಗಮ ಪ್ರದರ್ಶನ.
ಇನ್ನು ಈ ರಸ್ತೆ ಅಗಲೀಕರಣದಿಂದ ತುಮಕೂರು ನಗರದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ. ವಾಣಿಜ್ಯ, ಸಾರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ತಿಂಗಳಲ್ಲಿ 15 ಮಂದಿ ಸಾವು: ಮೃತ್ಯುಕೂಪವಾಯ್ತಾ ತುಮಕೂರು ರಾಷ್ಟ್ರೀಯ ಹೆದ್ದಾರಿ?
ಒಟ್ಟಿನಲ್ಲಿ ಹಲವು ವರ್ಷಗಳ ಕಾಯುವಿಕೆಗೆ ತೆರೆ ಎಳೆದಿರುವ ರಾಷ್ಟ್ರೀಯ ಹೆದ್ದಾರಿ, ಕೊನೆಗೂ ಅಗಲೀಕರಣ ಕಾಮಗಾರಿ ಆರಂಭವಾಗಿದೆ. ಈ ಮೂಲಕ ತುಮಕೂರು ನಗರದ ಸಂಚಾರ ವ್ಯವಸ್ಥೆಗೆ ಹೊಸ ಆಯಾಮ ನೀಡಲಿದೆ ಅನ್ನೋದು ಎಲ್ಲರ ಮಾತಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.