ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ನೇಪಾಳಿ ದಂಪತಿ!
ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನಲ್ಲಿ (ಬೆಂಗಳೂರು) ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನದ ಪ್ರಕರಣದಲ್ಲಿ ಮಾರತ್ ಹಳ್ಳಿ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನೆಕೆಲಸದ ಬಂಗಾರದ ಹೆಸರಿನಲ್ಲಿ ವಿಶ್ವಾಸ ಗಳಿಸಿದ ಆರೋಪಿಗಳು ನೇಪಾಳಿ ದಂಪತಿ ಎಂಬುದು ತನಿಖೆಯಿಂದ ದೃಢಪಟ್ಟಿದ್ದು, ಕದೀಮರನ್ನು ಹಿಡಿಯಲು ಬಲೆ ಬೀಸಿದ್ದಾರೆ.
ಆರೋಪಿಗಳು ದಿನೇಶ್ ಹಾಗೂ ಕಮಲ ಅಥವಾ ಸಲೀನಾ ಎಂಬ ನಕಲಿ ಹೆಸರುಗಳನ್ನು ಆರೋಪಿಗಳು ಮನೆಕೆಲಸಕ್ಕೆ ಸೇರಿ ಕಳ್ಳತನ ನಡೆಸುತ್ತಿದ್ದಾರೆಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ದಂಪತಿ ದೇಶದ ಅನೇಕ ಭಾಗಗಳಲ್ಲಿ ಇದೇ ರೀತಿಯ ಕೃತ್ಯಗಳನ್ನು ನಡೆಸುತ್ತಿರುವ ಈ ಶಂಕೆ ವ್ಯಕ್ತವಾಗಿದೆ. 2025ರ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಿವೃತ್ತ ಸರ್ಕಾರಿ ಅಧಿಕಾರಿಯ ಮನೆಯಲ್ಲಿ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರೆ ಕಾರ್ಯಾಚರಣೆ ವೇಳೆ.
ಈ ಹಿಂದೆಯೂ ವಿವಿಧೆಡೆ ಕಳ್ಳತನ ಮಾಡಿದ್ದ ಜೋಡಿ
ಪುಣೆಯ ಭಾವಧಾನ್ ಪ್ರದೇಶದ ವಿಂಡ್ಮಿಲ್ ಸೊಸೈಟಿಯ ರತ್ನಾದೀಪ್ ರಂಗನಾಥ್ ರಾವ್ ಅವರ ಮನೆಗೆ ಕೆಲಸಕ್ಕೆ ಸೇರಿ ಆರು ತಿಂಗಳ ಹಿಂದೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಾಕರ್ ಒಡೆದು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ನಂತರ ದಿನೇಶ್ ಹಾಗೂ ಸಲೀನಾ ಎಂಬ ಹೆಸರಿನಲ್ಲಿ ಮನೆ ಕೆಲಸಕ್ಕೆ ಸೇರಿ ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆಂದು ತಿಳಿದು ಬಂದಿದೆ.
ಈ ಪ್ರಕರಣದ ಬೆನ್ನತ್ತಿರುವ ಮಾರತ್ ಹಳ್ಳಿ ಪ್ರಕರಣದ ಏಳು ವಿಶೇಷ ತಂಡಗಳನ್ನು ಮುಂಬೈ, ಕೊಲ್ಕತ್ತಾ ಹಾಗೂ ನೇಪಾಳ ಸೇರಿ ಹಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ನೇಪಾಳಕ್ಕೆ ಪರಾರಿಯಾದ ವೇಳೆ ಅವರನ್ನು ಪತ್ತೆಹಚ್ಚುವುದು ಕಷ್ಟ ಎಂದು ತಿಳಿದುಬಂದಿದೆ. ಜೊತೆಗೆ ಸ್ಥಳೀಯವಾಗಿ ಯಾರಾದರೂ ಆರೋಪಿಗಳಿಗೆ ಸಹಾಯ ಮಾಡಿರುವುದನ್ನು ಕುರಿತು ತನಿಖೆಯೂ ಮುಂದುವರಿದಿದೆ ಎಂದು ತಿಳಿಸಲಾಗಿದೆ.
ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.