Headlines

ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ನಡೆಯಿತು ಶೋಧಕಾರ್ಯ

ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ನಡೆಯಿತು ಶೋಧಕಾರ್ಯ


ಚಿಕ್ಕಬಳ್ಳಾಪುರ, ಫೆಬ್ರವರಿ 2: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿನ್ನ ಹಾಗೂ ನಿಧಿ ನಿಕ್ಷೇಪಗಳ ಶೋಧ ಕಾರ್ಯ ತೀವ್ರಗೊಂಡಿದೆ. ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯು (ಜಿಎಸ್‌ಐ) ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದೆ. ಕೆಜಿಎಫ್ ಗೋಲ್ಡ್ ಮೈನಿಂಗ್ ಬೆಟ್ಟದ ಸಾಲಿನಲ್ಲಿ ಇರುವ ಈ ಪ್ರದೇಶದ ತಜ್ಞರು ಚಿನ್ನದ ಲಭ್ಯತೆಯನ್ನು ಪತ್ತೆಹಚ್ಚಲು ಶೋಧ ನಡೆಸುತ್ತಿದ್ದಾರೆ. ಈ ಹಿಂದೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ಮಣ್ಣಿನಲ್ಲಿ ಚಿನ್ನದ ಕಣಗಳು ಇದ್ದವು. ನಿರ್ದಿಷ್ಟವಾಗಿ ಹೇಳುವುದಾದರೆ, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕಿನ ರೈತರ ಜಮೀನುಗಳಲ್ಲಿ ಬಂಗಾರದ ಕಣಗಳು ಸಿಕ್ಕಿರುವುದು ದೃಢಪಟ್ಟಿತ್ತು.

ಹೆಲಿಕಾಪ್ಟರ್ ಬಳಸಿ ನಡೆಸುತ್ತಿರುವ ಈ ವೈಮಾನಿಕ ಸರ್ವೇ ಕಾರ್ಯವು ಪ್ರದೇಶದಲ್ಲಿ ಅಡಗಿರುವ ಚಿನ್ನ ಮತ್ತು ಇತರ ನಿಧಿ ನಿಕ್ಷೇಪಗಳ ಬಗ್ಗೆ ನಿಖರವಾದ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿಯಾಗಲಿದೆ. ಈ ಸಮೀಕ್ಷೆಯ ಫಲಿತಾಂಶಗಳು ಭವಿಷ್ಯದ ಗಣಿಗಾರಿಕೆ ಚಟುವಟಿಕೆಗಳಿಗೆ ಪ್ರಮುಖ ಮಾರ್ಗದರ್ಶನ ನೀಡುವ ನಿರೀಕ್ಷೆಯಿದೆ. ಈ ಮೂಲಕ ಈ ಐತಿಹಾಸಿಕ ಚಿನ್ನದ ಗಣಿಗಾರಿಕೆ ಪ್ರದೇಶದಲ್ಲಿ ಹೊಸ ಚಿನ್ನದ ನಿಕ್ಷೇಪಗಳು ಇರುವ ಸಾಧ್ಯತೆಗಳು ಹೆಚ್ಚಾಗಿವೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *