ನೆಲಮಂಗಲ, ಫೆಬ್ಬರವರಿ 02: ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದೆ. ಮಾದನಾಯಕನಹಳ್ಳಿಯ ದಾಸನಪುರದಲ್ಲಿ ಇಂತಹ ಒಂದು ಘಟನೆ ನಡೆದಿದ್ದು, ಟೀ ಮತ್ತು ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದ ವ್ಯಕ್ತಿಯೋರ್ವ ಮಹಿಳೆ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಹಳದಿ ಬೋರ್ಡ್ ಕಾರಿನಲ್ಲಿ ಇಬ್ಬರು ಬಂದಿದ್ದು, ಆ ಒಬ್ಬ ಕಾರಿನಿಂದ ಇಳಿದು ಅಂಗಡಿಗೆ ಬಂದು ಟೀ ಮತ್ತು ಸಿಗರೇಟ್ ಬೇಕು ಎಂದು ಕೇಳಿದ್ದಾನೆ. ನಂತರ ಫೋನ್ ಪೇ ಮೂಲಕ ಹಣ ಕೊಟ್ಟಿದ್ದಾನೆ ಹೇಳಿ, ಕ್ಯೂಆರ್ ಕೋಡ್ ಕೇಳಿದ್ದಾನೆ. ಅಂಗಡಿಯಲ್ಲಿದ್ದ ನಾಗರತ್ನಮ್ಮ ಅವರು ತಮ್ಮ ಮೊಬೈಲ್‌ನಲ್ಲಿ ಸ್ಕ್ಯಾನರ್ ತೆಗೆಯಲು ಸಿದ್ಧರಾದಾಗ, ಅವರ ಗಮನವನ್ನು ಬೇರೆಡೆ ಸೆಳೆದು ಏಕಾಏಕಿ ಕತ್ತಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಓಡಿಹೋಗಿದ್ದಾನೆ. ಸಿಸಿಟಿವಿ ಕ್ಯಾಮರಾದಲ್ಲಿ ಘಟನೆ ಸಂಪೂರ್ಣವಾಗಿ ಸೆರೆಹಿಡಿಯಲಾಗಿದೆ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.