Headlines

ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ

ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ


ಹೆಲಿಕಾಪ್ಟರ್ ಮೂಲಕ ಶೋಧಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ

ಚಿಕ್ಕಬಳ್ಳಾಪುರ, ಫೆಬ್ರವರಿ 02: ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ (ಹೆಲಿಕಾಪ್ಟರ್ ಸಮೀಕ್ಷೆ) ಮೂಲಕ ಬಂಗಾರ ಸೇರಿದಂತೆ ಭೂಗರ್ಭದಲ್ಲಿರುವ ನಿಧಿ-ನಿಕ್ಷೇಪಗಳ ಶೋಧಕಾರ್ಯ ನಡೆಯುತ್ತಿದೆ. ಇದರಿಂದ ಸ್ಥಳೀಯರಲ್ಲಿ ಕುತೂಹಲವಿದೆ. ಭಾರತೀಯ ಭೂ ಸರ್ವೇಕ್ಷಣಾ ಇಲಾಖೆ (ಜಿಎಸ್‌ಐ) ವತಿಯಿಂದ ಈ ಏರಿಯಲ್ ಸರ್ವೆ ನಡೆಸಲಾಗುತ್ತಿದೆ. ಹೆಲಿಕಾಪ್ಟರ್ ಹಾಗೂ ಅತ್ಯಾಧುನಿಕ ಸಲಕರಣೆಗಳನ್ನು ಬಳಸಿ ಭೂಗರ್ಭದ ಖನಿಜ ಸಂಪತ್ತಿನ ಕುರಿತು ಸಮಗ್ರ ಶೋಧ ಕಾರ್ಯವನ್ನು ಕೈಗೊಳ್ಳಲಾಗಿದೆ.

ಕೆ.ಜಿ.ಎಫ್. ಗೋಲ್ಡ್ ಮೈನಿಂಗ್ ಬೆಟ್ಟದ ಸಾಲಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಶೋಧಕಾರ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಬೀಚಗಾನಹಳ್ಳಿ ಕ್ರಾಸ್ ಪ್ರದೇಶದ ಹೆಲಿಕಾಪ್ಟರ್ ಲ್ಯಾಂ ಮತ್ತು ಟೇಕಾಫ್ ಸಹಿತ ಏರಿಯಲ್ ಸರ್ವೆ ನಡೆಸಲು ಚಿಕ್ಕಬಳ್ಳಾಪುರ ಆಬ್ರ್ಯಾಕ್ಟ್‌ನಿಂದ ಅನುಮತಿ ಪಡೆಯಲಾಗಿದೆ.

ದಿಢೀರ್ ಶೋಧಕಾರ್ಯ ಏಕೆ?

ಈ ಹಿಂದೆ ಕೂಡ ಜಿಲ್ಲೆಯಲ್ಲಿ ಬಂಗಾರದ ಕಣಗಳು ಸೇರಿದ್ದವು. ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕಿನ ಕೆಲ ರೈತರ ಜಮೀನುಗಳ ಮಣ್ಣಿನಲ್ಲಿ ಬಂಗಾರದ ಕಣಗಳು ಕಂಡುಬಂದಿವೆ. ಇದೇ ಹಿನ್ನೆಲೆಯಲ್ಲಿ ಇದೀಗ ಹೆಲಿಕಾಪ್ಟರ್ ಮೂಲಕ ಭೂಗರ್ಭ ನಿಧಿ-ನಿಕ್ಷೇಪಗಳ ಶೋಧಕಾರ್ಯ ಕೈಗೊಳ್ಳಲಾಗಿದೆ.

ಮೇ 31ರವರೆಗೂ ಸರ್ವೆ ನಡೆಯುತ್ತೆ: ಜಿಲ್ಲಾಧಿಕಾರಿ ಜಿ.ಪ್ರಭು

ಈ ಬಗ್ಗೆ ಟಿವಿ9ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ.ಪ್ರಭು ಪ್ರತಿಕ್ರಿಯೆ ನೀಡಿದ್ದು, ಜಿಲ್ಲೆಯಲ್ಲಿ 2019-2020ರಲ್ಲಿ ಸರ್ವೆ ಕಾರ್ಯ ನಡೆದಿದೆ. ಆ ಸರ್ವೆ ನಂತರ ಈಗ ಆಳ ಅಧ್ಯಯನ ನಡೆದಿದೆ. ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯ ಭೌಗೋಳಿಕ ಮಾಹಿತಿ ವ್ಯವಸ್ಥೆ ವಿಭಾಗ ಹಾಗೂ ರಿಮೋಟ್ ಸೆನ್ಸಿಂಗ್ ವಿಭಾಗದಿಂದ ಸರ್ವೆ ನಡೆಯುತ್ತಿದೆ.

ಇದನ್ನೂ ಓದಿ: ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧಕಾರ್ಯ

ಮೂಲ ಲೋಹಗಳು ಸೇರಿದಂತೆ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಸೇರಿದಂತೆ ಲೋಹಗಳಿರುವ ಬಗ್ಗೆ ಸರ್ವೆ ಮಾಡಲಾಗುತ್ತಿದ್ದು, ಮೇ 31ರವರೆಗೂ ಸರ್ವೆ ನಡೆಯುತ್ತೆ. ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸರ್ವೆ ನಡೆಯಲಿದ್ದು, ಹೆಲಿಕಾಪ್ಟರ್ ತೀರ ಕೆಳ ಹಂತದಲ್ಲಿ ಸಂಚಾರ ಮಾಡಲಿದೆ. ಹೀಗಾಗಿ ಸಾರ್ವಜನಿಕರು ಭಯ ಬೀಳದಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಎಸ್ ಪಿ ಕುಶಲ್ ಚೌಕ್ಸೆ ಹೇಳಿದ್ದಿಷ್ಟು

ಇನ್ನು ಚಿಕ್ಕಬಾಳ್ಳಾಪುರ ಎಸ್ ಎಸ್ ಕುಶಲ್ ಚೌಕ್ಸೆ ಮಾತನಾಡಿದ್ದು, ಸುಮಾರು 15 ದಿನಗಳ ಹಿಂದೆಯೇ ಭಾರತೀಯ ಭೂ ನಿರ್ಮಿತ ಸರ್ವೇಕ್ಷಣಾ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಮತ್ತೊಂದೆಡೆ ಹೆಲಿಕಾಪ್ಟರ್ ಹಾರಾಟ ಮತ್ತು ಶೋಧ ಕಾರ್ಯ ನೋಡಲು ಸ್ಥಳೀಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *