ಪಿಲಿಕುಳ ಜೈವಿಕ ಉದ್ಯಾನವನಚಿತ್ರದ ಕ್ರೆಡಿಟ್ ಮೂಲ: ಗೂಗಲ್
ಮಂಗಳೂರು, ಫೆಬ್ರವರಿ 02: ಕರಾವಳಿ ಮೆಚ್ಚಿನ ತಾಣ ಪಿಲಿಕುಳ ಝೂ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದೆ. ಅದು ಎಷ್ಟರ ಮಟ್ಟಿಗೆ ಅಂದರೆ ಇಲ್ಲಿಯ ಸ್ಥಿತಿ ಕಂಡು ಹೆಚ್ಚಿನ ನ್ಯಾಯಾಧೀಶರೇ ಶಾಕ್ ಆಗಿದ್ದಾರೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಗರಂ ಆಗಿದ್ದಾರೆ. ಅವರನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ರೆ ತಕ್ಷಣ ಬಂದ್ ಮಾಡಿ ಎಂದು ಸರ್ಕಾರಕ್ಕೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಮಂಗಳೂರು ಹೊರ ವಲಯದ ಪಿಲಿಕುಳ ಝೂ, ಸುಮಾರು 370 ಡಾಲರ್ಗಳಷ್ಟು ವಿಶಾಲವಾಗಿರುವ ಪ್ರದೇಶದಲ್ಲಿರುವ ನಿಸರ್ಗಧಾಮ. ಪಶ್ಚಿಮ ಘಟ್ಟಗಳಲ್ಲಿ ಅಳಿವಿನಂಚಿನಲ್ಲಿರೋ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರೋ ಪಿಲಿಕುಳ ವಿದ್ಯಾರ್ಥಿಗಳು, ನೆಚ್ಚಿನ ತಾಣ. ಅಂತಹ ಸುಂದರ ತಾಣ ಇಂದು ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ತುಕ್ಕು ಹಿಡಿದ ಪಂಜರ, ಕಲುಷಿತ ನೀರು, ಮೇಲಿಂದ ಮೇಲೆ ಮೃತಪಡುತ್ತಿರುವ ಪ್ರಾಣಿಗಳು, ಅಶುಚಿ ವಾತಾವರಣ ಪಿಲಿಕುಳ ಮೃಗಾಲಯದ ಸದ್ಯದ ಸ್ಥಿತಿ. ದುರಂತ ಅಂದ್ರೆ ಜನಮನ್ನಣೆ ಪಡೆದ ಈ ಪಾರ್ಕ್ ಲೈಸೆನ್ಸ್ ಅವಧಿ 2025ರ ಡಿಸೆಂಬರ್ 1ಕ್ಕೆ ಮುಕ್ತಾಯವಾಗಿದೆ. ಆದರೂ ಯಾವುದೇ ಪರವಾನಗಿ ಇಲ್ಲದೆ ಪಿಲಿಕುಳ ಮೃಗಾಲಯ ನಡೀತಿದೆ. ಅಲ್ಲಿನ ಅವ್ಯವಸ್ಥೆ ಕೇಂದ್ರದ ಬಗ್ಗೆ ಸಂಗ್ರಹಾಲಯ ಪ್ರಾಧಿಕಾರ 2023 ಮತ್ತು 2025ರಲ್ಲಿ ಶೋಕಾಸ್ ನೋಟಿಸ್ ನೀಡಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ. ಮಲಿನಗೊಂಡ ನೀರು ಕುಡಿದು, ಸರಿಯಾದ ಚಿಕಿತ್ಸೆ ಸಿಗದೆ ಮೂಕ ಪ್ರಾಣಿಗಳು ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿವೆ ಅನ್ನೋದು ಅರ್ಜಿದಾರರ ಗಂಭೀರ ಆರೋಪ.
ಇದನ್ನೂ ಓದಿ: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ, ತಾತ್ಕಾಲಿಕವಾಗಿ ಮುಚ್ಚಲು ಪಿಐಎಲ್
ಈ ಪರವಾನಗಿ ನವೀಕರಣಕ್ಕೆ ಅರ್ಜಿ ಸಲ್ಲಿಸಲಾಯಿತು, ಅದು ಪರಿಶೀಲನೆಯಲ್ಲಿದೆ ಎಂದು ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು. ಜೊತೆಗೆ ಆರೋಪಗಳ ಕುರಿತು ಉತ್ತರಿಸಲು ಸಮಯಾವಕಾಶ ಕೇಳಿದ್ದಾರೆ. ಆದರೆ ನ್ಯಾಯಾಲಯ ಮಾತ್ರ ಪ್ರಾಣಿಗಳಿಗೆ ರಕ್ಷಣೆ ನೀಡಲು ಸಾಧ್ಯವಾಗದಿದ್ರೆ ಅದನ್ನು ಮುಚ್ಚಿಬಿಡಿ ಸರ್ಕಾರಕ್ಕೆ ಎಚ್ಚರಿಕೆ, ಫೆಬ್ರವರಿ 5ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.