
ಈ ದಿನ ಹಯಗ್ರೀವ ಮಂತ್ರದ ಶ್ರವಣ ಮಾಡುವುದರಿಂದ ಕೆಲಸದಲ್ಲಿ ಖಚಿತತೆ, ಗೊಂದಲಗಳ ನಿವಾರಣೆಯಾಗುತ್ತದೆ. ಇನ್ನು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡುತ್ತಾ ಇದ್ದಲ್ಲಿ ಸಮಸ್ಯೆಯಿಂದ ಹೊರಬರಲು ಅನುಕೂಲವಾಗುತ್ತದೆ .
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಬಹಳಷ್ಟು ಆಗಲಿದೆ. ಶಿಕ್ಷಣ, ತರಬೇತಿ, ಬರವಣಿಗೆಗೆ ಸಂಬಂಧಿಸಿದ ಕೆಲಸಗಳಲ್ಲಿ ತೊಡಗಿಸಿಕೊಂಡವರಿಗೆ ಉತ್ತಮ ಫಲ ಸಿಗುತ್ತದೆ. ನಿಮ್ಮಲ್ಲಿ ಕೆಲವರಿಗೆ ಬಡ್ತಿ, ವೇತನದ ಬಗ್ಗೆ ಇತರರ ಮೂಲಕ ಸುಳಿವು ದೊರೆಯಲಿದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಭಾವನಾತ್ಮಕ ದೃಷ್ಟಿಯಿಂದ ಏಳುಪೇರಿನಿಂದ ಕೂಡಿರುವ ದಿನ ಇದಾಗಿದೆ. ಸಣ್ಣ- ಪುಟ್ಟ ವಿಚಾರಗಳಿಗೆ ಮನಸ್ಸು ತೀವ್ರವಾಗಿ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ಈ ನಿರ್ಧಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿನ ಕೆಲವು ಗೊಂದಲಗಳನ್ನು ಮಾತುಕತೆ ಮೂಲಕ ಪರಿಹರಿಸಬಹುದು. ನೀವು ಉದ್ಯೋಗಸ್ಥರಲ್ಲಿ ಸವಾಲಿನಿಂದ ಕೂಡಿದ ಪ್ರಾಜೆಕ್ಟ್ ಮುನ್ನಡೆಸುತ್ತಾ ಇದ್ದೀರಿ ಅಂತಾ ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ಈ ದಿನ ನಿಮ್ಮಲ್ಲಿನ ನಾಯಕತ್ವ ಗುಣವು ಹೆಚ್ಚು ಪ್ರಚಾರಕ್ಕೆ ಬರುತ್ತವೆ. ಉದ್ಯೋಗ ಸ್ಥಳದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರಿಗೆ ಮಾರ್ಗದರ್ಶನ ಆಗಲಿದೆ. ಮೇಲಧಿಕಾರಿಗಳ ಗಮನ ನಿಮ್ಮತ್ತ ಸೆಳೆಯುವ ಸಾಧ್ಯತೆಯಿದೆ. ಹೊಸ ಜವಾಬ್ದಾರಿಗಳನ್ನು ನಿಮಗೆ ವಹಿಸಬಹುದು. ನೀವು ಯಾವುದೇ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದರೂ ಹಣಕಾಸಿನ ವಿಷಯದಲ್ಲಿ ಸ್ಥಿರತೆ ಕಂಡುಬರುತ್ತದೆ.
ಲೇಖನ- ಸ್ವಾತಿ ಎನ್.ಕೆ.