Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ


Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡುವುದರಿಂದ ಆರ್ಥಿಕ ಹರಿವಿನಲ್ಲಿ ಅನುಭವಿಸುತ್ತಿರುವ ಅಸ್ಥಿರತೆಯ ಸಮಸ್ಯೆ ನಿವಾರಣೆಯಾಗುತ್ತದೆ. ದೀರ್ಘ ಕಾಲದಿಂದ ಬರಬೇಕಾದ ಹಣವೇನಾದರೂ ಬಾಕಿ ಉಳಿದಿದ್ದರೆ ಅದು ನಿಮ್ಮ ಕೈ ಸೇರುವುದಕ್ಕೆ ಮಾರ್ಗೋಪಾಯ ಗೋಚರವಾಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚು ಆಗುವಂಥ ಯೋಗ ಇದೆ. ನಿಮಗೆ ಹೊಸದಾಗಿ ಪರಿಚಯ ಆಗುವ ವ್ಯಕ್ತಿಗಳ ಮೂಲಕ ಭವಿಷ್ಯದಲ್ಲಿ ದೊಡ್ಡ ಮಟ್ಟದ ಅನುಕೂಲ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನವ ವಿವಾಹಿತರಿಗೆ ಸಂತೋಷವಾಗಿ ಕಳೆಯುವಂಥ ಯೋಗ ಇದೆ. ಪ್ರೀತಿ- ಪ್ರೇಮದಲ್ಲಿ ಇರುವವರು ಮನೆಯಲ್ಲಿ ಈ ವಿಚಾರವನ್ನು ಪ್ರಸ್ತಾವ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಾಹಿತರು ಇದ್ದಲ್ಲಿ ಸಂಗಾತಿಯ ಮೂಲಕ ಹಣಕಾಸಿನ ನೆರವು ದೊರೆಯಲಿದೆ. ಕಲೆ, ಫ್ಯಾಷನ್, ಸೌಂದರ್ಯ, ಈ ವಿನ್ಯಾಸ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಶುಭ ಫಲ ಸಿಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸರಿ- ತಪ್ಪುಗಳ ಬಗ್ಗೆ ಆತ್ಮವಿಶ್ಲೇಷಣೆ ಮಾಡಿಕೊಳ್ಳುವುದಕ್ಕೆ ಸೂಕ್ತವಾದ ದಿನ ಇದಾಗಿದೆ. ಗಂಭೀರವಾದ ಸಂಗತಿಗಳ ಬಗ್ಗೆ ಪ್ಲಾನಿಂಗ್-ಬಜೆಟ್ ಸಿದ್ಧ ಮಾಡಿಕೊಳ್ಳಲು ನೀವು ಒಬ್ಬರೇ ದೂರದ ಪ್ರದೇಶಗಳಿಗೆ ಏಕಾಂಗಿಯಾಗಿ ಹೋಗುವುದಕ್ಕೆ ನಿರ್ಧಾರ ತೆಗೆದುಕೊಳ್ಳಬೇಕು. ಉದ್ಯೋಗ ಸ್ಥಳದಲ್ಲಿ ನಿಮ್ಮ ಸಾಮರ್ಥ್ಯವನ್ನು ಹೀಗಳೆಯುವುದು ಮಾತನಾಡುವುದರಿಂದ ಏಕಾಗ್ರತೆ ಕಳೆದುಕೊಳ್ಳುವಂತೆ ಆಗಲಿದೆ. ತುಂಬ ಮುಖ್ಯವಾದ ಕೆಲಸ ಮಾಡುತ್ತಿದ್ದೀರಿ ಅಂತಾ ದಿನದಿಂದ ಅದನ್ನು ಮುಂದೂಡುವುದು ಕ್ಷೇಮ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *